ಸಮಸ್ಯೆಗಳಿದ್ದರೆ ಕಚೇರಿಗೆ ದೂರು ಸಲ್ಲಿಸಿ: ಶಾಸಕ ರವಿಕುಮಾರ್ ಗಣಿಗ ಹೇಳಿಕೆ

1 (4)
Published on

ಮಂಡ್ಯ: ಕ್ಷೇತ್ರದ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದರೂ ಕಚೇರಿಗೆ ಸಲ್ಲಿಸಿ. ಅದನ್ನು ಗಮನಹರಿಸಿ ಬಗೆಹರಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.

ನಗರಸಭೆ ಕಾರ್ಯಾಲಯದಲ್ಲಿ ತಮ್ಮ ಹಾಗೂ ಆಪ್ತ ಸಹಾಯಕನ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರ ಕುಂದುಕೊರತೆಯಲ್ಲಿ ಆಲಿಸಲು ಕ್ರಮ ವಹಿಸಲಾಗಿದೆ. ಅಂತೆಯೇ ಯಾವುದೇ ದೂರುಗಳಿದ್ದರೂ ಕಚೇರಿಗೆ ಸಲ್ಲಿಸಬಹುದು ಎಂದರು.

ಮನ್‌ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಪ್ಪ, ಪೌರಾಯುಕ್ತ ಮಂಜುನಾಥ್ ಇತರರಿದ್ದರು. ಇದೇ ವೇಳೆ ಹಲವರು ಕಚೇರಿಗೆ ಆಗಮಿಸಿ ಶಾಸಕರನ್ನು ಅಭಿನಂದಿಸಿದರು. ಅಂತೆಯೇ ಎಲ್ಲರಿಗೂ ಸಿಹಿ ವಿತರಿಸಲಾಯಿತು.

ಇಂದು ಕಚೇರಿ ಉದ್ಘಾಟನೆ: ಮಂಡ್ಯ ವಿಧಾನಸಭಾ ಕ್ಷೇತ್ರದ ಜನರ ಸಮಸ್ಯೆ ಆಲಿಸಲು ಹಾಗೂ ಸಾರ್ವಜನಿಕರ ನೇರ ಸಂಪರ್ಕಕ್ಕಾಗಿ ಜೂ.15ರಂದು ನಗರದ ಕಾವೇರಿ ಭವನದಲ್ಲಿ ಶಾಸಕರ ಕಚೇರಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ. ಬೆಳಗ್ಗೆ 8ಗಂಟೆಗೆ ಶಾಸಕ ರವಿಕುಮಾರ್ ಕಚೇರಿ ಉದ್ಘಾಟಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

ನಿಯೋಗದಿಂದ ಸಚಿವರ ಭೇಟಿ: ಅನುದಾನಕ್ಕೆ ಸಂಬಂಧಿಸಿದಂತೆ ಶಾಸಕ ರವಿಕುಮಾರ್ ಗಣಿಗ ನೇತೃತ್ವದ ನಿಯೋಗ ಮಂಗಳವಾರ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಭೇಟಿ ಮಾಡಲಾಗಿದೆ. ಬೆಂಗಳೂರಿನ ಸಚಿವಾಲಯದ ಕಚೇರಿಯಲ್ಲಿ ಭೇಟಿ ಮಾಡಿ ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಸತಿ ಅನುದಾನ ಹಾಗೂ ಅಲ್ಪಸಂಖ್ಯಾತ ನಿಗಮಕ್ಕೆ ಹೆಚ್ಚುವರಿ ಅನುದಾನ ನೀಡುವ ಮೂಲಕ ಸಮಗ್ರ ಮಂಡ್ಯ ನಿರ್ಮಾಣಕ್ಕೆ ಸಹಕಾರ ನೀಡುವಂತೆ ನಿಯೋಗ ಮನವಿ ಮಾಡಿತು. ಮಂಡ್ಯ ನಗರಸಭೆ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net