ಪರಿಣಾಮಕಾರಿ ಬೋಧನೆ ಇಂದಿನ ಅಗತ್ಯ

web 3
Published on

ಧಾರವಾಡ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು ಪರಿಣಾಮಕಾರಿ ಬೋಧನೆಯನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ ಈಶ್ವರ ಹೇಳಿದರು.
ನಗರದ ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿ ಬುಧವಾರ ಭೇಟಿ ನೀಡಿದ್ದ ಅವರು ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಹೆಚ್ಚು ಅಂಕಗಳನ್ನು ಗಳಿಸಲು ಪರಿಣಾಮಕಾರಿ ಬೋಧನೆ ಅಗತ್ಯ. ಉನ್ನತ ಶಿಕ್ಷಣ ಅಕಾಡೆಮಿಯು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಎಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿ ಅಕಾಡೆಮಿಯ ಪ್ರಯೋಜನ ಪಡೆಯಬೇಕು ಎಂದರು.
ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿಯ ನಿರ್ದೇಶಕ ಪ್ರೊ. ಎಸ್.ಎಂ. ಶಿವಪ್ರಸಾದ ಅಧ್ಯಕ್ಷತೆ ವಹಿಸಿದ್ದರು. ಡೀನ್ ಡಾ. ಎಚ್.ಬಿ. ನೀಲಗುಂದ, ಡಾ. ಅರುಂಧತಿ ಕುಲಕರ್ಣಿ, ಡಾ. ಐ.ಬಿ. ಸಾತಿಹಾಳ, ಮುಖ್ಯ ಗ್ರಂಥಪಾಲಕ ಡಾ. ಮಲ್ಲಿಕಾರ್ಜುನ ಮೂಲಿಮನಿ, ಸಂಯೋಜಕಿ ದೀಪಾ ಗರಗ, ಸುಧಾ ಹೆಗಡೆ, ಇಂದುಮತಿ ವಿ.ಆರ್. ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net