ಗ್ರಾಮಗಳ ಅಭಿವೃದ್ಧಿಗೆ ಬದ್ಧ, ಶಾಸಕ ರಾವೇಂದ್ರ ಹಿಟ್ನಾಳ ಭರವಸೆ

mla Raghavendra hitnala stoning ceremony koppal
Published on

ಕೊಪ್ಪಳ: ಕ್ಷೇತ್ರದ ಗ್ರಾಮಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ತಂದಿದ್ದು ಮುಂದೆಯೂ ಅಭಿವೃದ್ಧಿ ಮಾಡಲಾಗುವುದೆಂದು ಶಾಸಕ ರಾವೇಂದ್ರ ಹಿಟ್ನಾಳ ಭರವಸೆ ನೀಡಿದರು.

ತಾಲೂಕಿನ ಬಂಡಿಹರ್ಲಾಪುರ ಜಿಪಂ ವ್ಯಾಪ್ತಿ ಗ್ರಾಮಗಳಲ್ಲಿ ಬುಧವಾರ 9.52 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದರು.

ಕಳೆದ 11 ವರ್ಷದಲ್ಲಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಿರುವೆ. ಎಲ್ಲ ಗ್ರಾಮಗಳಿಗೆ ಸಮಾನ ಅನುದಾನ ಹಂಚಿಕೆ ಮಾಡಲಾಗಿದೆ. ಹಲವು ಅಭಿವೃದ್ಧಿ ಕೆಲಸ ಮಾಡಿದ್ದು, ಮುಂದೆಯೂ ಅಭಿವೃದ್ಧಿ ಕೆಸಲಗಳನ್ನು ಮಾಡಲಾಗುವುದು. ಅಗತ್ಯ ಅನುದಾನ ಒದಗಿಸಲಾಗುವುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಕ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಈ ವರ್ಷ 5 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದೆ ಎಂದರು.

ಅಗಳಕೇರಿ, ಹೊಸ ಬಂಡಿ ಹರ್ಲಾಪುರ ಗ್ರಾಮಗಳಲ್ಲಿ ಡಿವೈಡರ್​ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಹಳೇ ಬಂಡಿ ಹರ್ಲಾಪುರ ವ್ಯಾಪ್ತಿಯಲ್ಲಿ ಜಂಪ್​ ಸರ್ವೇ ಸಮಸ್ಯೆ ಇದ್ದು, ಡಿಸಿ ಜತೆ ಚರ್ಚಿಸಿದ್ದು ಪರಿಹಾರಕ್ಕೆ ಯತ್ನಿಸಲಾಗುವುದು. ಸೆ.22ರಂದು ತುಂಗಭದ್ರಾ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಿಸಲಿದ್ದಾರೆ ಎಂದು ತಿಳಿಸಿದರು.

ಮಾಜಿ ಸಂಸದ ಸಂಗಣ್ಣ ಕರಡಿ, ಚಂದ್ರಶೇಖರ್​ ಐಎಲ್ಸಿ, ಜಿಪಂ ಮಾಜಿ ಅಧ್ಯಕ್ಷ ಜನಾರ್ದನ ಹುಲಿಗಿ, ವೆಂಕಟೇಶ್​ ಕಂಪಸಾಗರ, ಕೃಷ್ಣಾರೆಡ್ಡಿ ಗಲಬಿ, ಗಾಳೆಪ್ಪ ಪೂಜಾರ, ಾಲಾಕ್ಷಪ್ಪ ಗುಂಗಾಡಿ, ವಿಶ್ವನಾಥ ರಾಜು, ಯಮನೂರಪ್ಪ ಭೋವಿ, ನಾಗರಾಜ ಪಟವಾರಿ, ಕನಕಪ್ಪ ಅಗಳಕೇರಿ, ಈರಣ್ಣ ಹುಲಿಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net