

ಚಳ್ಳಕೆರೆ: ಜನರಲ್ಲಿ ದೇಶಾಭಿಮಾನ ಮೂಡಿಸುವ ಇಂತಹ ಕಾರ್ಯಕ್ರಮವನ್ನು ಶಾಲೆಯ ಒಂದು ಕೊಠಡಿಯಲ್ಲಿ ಆಯೋಜಿಸಿರುವುದು ಎಷ್ಟು ಸರಿ ಎಂದು ಶಾಸಕ ಟಿ.ರಘುಮೂರ್ತಿ ಸಂಬಂಧಿಸಿದವರನ್ನು ತರಾಟೆಗೆ ತೆಗೆದುಕೊಂಡರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಗರಸಭೆ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜನಸಾಮಾನ್ಯರು ಒಳಗೊಂಡಂತೆ ಮಾಜಿ ಸೈನಿಕರು, ಸಾಮಾಜಿಕ ಹೋರಾಟಗಾರರು ಸೇರಿ ಸಾವಿರಾರು ಜನಸಂಖ್ಯೆ ಸೇರಿಸಿ ಇಂತಹ ಕಾರ್ಯಕ್ರಮ ಮಾಡಬೇಕಿತ್ತು. ಆದರೆ, ಸರಳವಾಗಿ, ಬೆರಳೆಣಿಕೆ ಮಂದಿ ಸೇರಿಸಿರುವುದು ಸರಿಯಲ್ಲ. ಈ ಕಾರ್ಯಕ್ರಮದ ಕುರಿತು ನನಗೆ ಮುಂಚಿತವಾಗಿ ಮಾಹಿತಿ ನೀಡಿಲ್ಲ ಎಂದು ಪೌರಾಯುಕ್ತ ಸಿ.ಚಂದ್ರಪ್ಪ, ಪ್ರಾಚಾರ್ಯ ಡಾ.ಆರ್.ರಂಗಪ್ಪ ಅವರ ವಿರುದ್ಧ ಗರಂ ಆದರು.
ಇದಕ್ಕೆ ಪ್ರತಿಕ್ರಿಯಿಸಿದ ಪೌರಾಯುಕ್ತರು, ಇನ್ನೊಮ್ಮೆ ಬೃಹತ್ ಮಟ್ಟದಲ್ಲಿ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸುವುದಾಗಿ ಪೌರಾಯುಕ್ತರು ಹೇಳಿದರು.