ನಾಯಕತ್ವ ಬದಲಾವಣೆ ಚರ್ಚೆಯಾಗಿಲ್ಲ: ಉಡುಪಿ ಶಾಸಕ ರಘುಪತಿ ಭಟ್ ಹೇಳಿಕೆ

raghupati bhat
Published on

ಉಡುಪಿ: ಬಿಜೆಪಿ ಹೈಕಮಾಂಡ್ ಅರುಣ್ ಸಿಂಗ್ ಬೆಂಗಳೂರು ಭೇಟಿ ವಿಚಾರದ ಬಗ್ಗೆ ಮಾತನಾಡಿದ ರಘುಪತಿ ಭಟ್, ಸಭೆಯಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆಯೇ ಆಗಿಲ್ಲ. ಶಾಸಕರಿಗೆ ಅಭಿಪ್ರಾಯ ಹೇಳಲು ನಾಯಕರು ಅವಕಾಶ ನೀಡಿದ್ದಾರೆ. ಶಾಸಕರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಮತ್ತು ಪಕ್ಷದಿಂದ ಏನು ಸಹಕಾರ ಬೇಕು ಎಂದು ಕೇಳಿದ್ದಾರೆ. ಪಕ್ಷದ ಹೈಕಮಾಂಡ್ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಯಡಿಯೂರಪ್ಪನವರ ನಾಯಕತ್ವ ಬೇಕು ಅಥವಾ ಬೇಡ ಎಂಬ ಪ್ರಶ್ನೆಯೇ ಉದ್ಭವವಾಗಿಲ್ಲ. ಶಾಸಕರ ಅಭಿಪ್ರಾಯಗಳೇನೇ ಇದ್ದರೂ ಮಾಧ್ಯಮಗಳ ಮುಂದೆ ಹೇಳದೆ ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪಿಸುವಂತೆ ಅರುಣ್ ಸಿಂಗ್ ತಿಳಿಸಿದ್ದಾರೆ. ಎರಡು ಮೂರು ಮಂದಿ ನಾಯಕರು ಪಕ್ಷದ ನಿಯಮವನ್ನು ಮೀರಿ ಮಾತನಾಡಿರಬಹುದು. ಇದನ್ನು ಯಾರು ಒಪ್ಪುವಂಥದ್ದಲ್ಲ. ಬಿಜೆಪಿಯಂತಹ ಶಿಸ್ತಿನ ಪಕ್ಷದಲ್ಲಿ ಈ ರೀತಿ ಬಹಿರಂಗವಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net