

ಮಂಡ್ಯ: ತಾಲೂಕಿನ ಹೊನಗಾನಹಳ್ಳಿ ಗ್ರಾಮದಲ್ಲಿ ಬೇವಿನ ತಾಳಲಿಂಗೇಶ್ವರ ಸಮುದಾಯ ಭವನದ ಅಭಿವೃದ್ಧಿ ಕಾಮಗಾರಿಗೆ ಶಾಸಕ ರವಿಕುಮಾರ್ ಗಣಿಗ ಗುರುವಾರ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಹೊನಗಾನಹಳ್ಳಿ ಗ್ರಾಮದ ಅಭಿವೃದ್ಧಿಗೆ ಶಕ್ತಿಮೀರಿ ಕೆಲಸ ಮಾಡುತ್ತೇನೆ. ಮುಂದಿನ ಒಂದು ತಿಂಗಳ ಅವಧಿಯಲ್ಲಿ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗದಾಣ ನಿರ್ಮಾಣ ಮಾಡುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಎನ್.ಯೋಗೇಶ್, ಮುಖಂಡರಾದ ಎಲ್.ರಮೇಶ್, ಎಚ್.ಎನ್.ರಮೇಶ್, ಮರಿಸ್ವಾಮಿ, ಶಿವಲಿಂಗಯ್ಯ, ಬೂದನೂರು ಸಿದ್ದಪ್ಪ, ಎಚ್.ಎಂ.ರಮೇಶ್, ಎಚ್.ಸಿ.ಬಸವರಾಜ್, ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸತೀಶ್ ಇತರರಿದ್ದರು.