ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭ: ಶಾಸಕ ರವಿಕುಮಾರ್ ಗಣಿಗ ಹೇಳಿಕೆ

MLA Ravikumar drive to development work mandya
Published on

ಮಂಡ್ಯ: ತಾಲೂಕಿನಲ್ಲಿ ಅಭಿವೃದ್ಧಿ ಪರ್ವ ಆರಂಭಗೊಂಡಿದೆ. ಇನ್ನು 3 ತಿಂಗಳಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.

ತಾಲೂಕಿನ ಹುಲಿವಾನ, ಜೀಗುಂಡಿಪಟ್ಟಣ, ಎಸ್.ಐ.ಕೋಡಿಹಳ್ಳಿ, ಮಲ್ಲಘಟ್ಟ ಗ್ರಾಮದಲ್ಲಿ ಮಂಗಳವಾರ ಜಲಜೀವನ್ ಮಿಷನ್ ಯೋಜನೆಯಡಿ ಪೈಪ್‌ಲೈನ್ ಹಾಗೂ ನಲ್ಲಿ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ ಅವರು, ಹುಲಿವಾನ ಗ್ರಾಮಕ್ಕೆ 2,08 ಕೋಟಿ ರೂ, ಜೀಗುಂಡಿಪಟ್ಟಣ ಗ್ರಾಮಕ್ಕೆ 83.90 ಲಕ್ಷ ರೂ, ಎಸ್.ಐ ಕೋಡಿಹಳ್ಳಿ ಗ್ರಾಮಕ್ಕೆ 132 ಲಕ್ಷ ರೂ, ಮಲ್ಲಘಟ್ಟದಲ್ಲಿ 82 ಲಕ್ಷ ರೂ ವೆಚ್ಚದ ಕಾಮಗಾರಿ ನಡೆಯುತ್ತಿದೆ. ಸ್ಥಳೀಯರು ರಸ್ತೆ, ಸಮುದಾಯ ಭವನ, ಅಂಬೇಡ್ಕರ್ ಭವನ, ದೇವಾಲಯದ ಅಭಿವೃದ್ದಿಗೆ ಮನವಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕೆಲಸಕಾರ್ಯಗಳನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net