ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ಇಂದು ಕಾಂಗ್ರೆಸ್ ಸೇರ್ಪಡೆ

ShivaramHebbar
Published on

ಶಿರಸಿ: ತಾಲೂಕಿನ ಬನವಾಸಿಯಲ್ಲಿ ಸಚಿವ ಮಂಕಾಳು ವೈದ್ಯ ಸಮ್ಮುಖದಲ್ಲಿ ಇಂದು ವಿವೇಕ್​ ಹೆಬ್ಬಾರ್ ಅವರ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ.

ಇದೇ ವೇಳೆ ಅವರು ನೂರಾರು ಬೆಂಬಲಿಗರನ್ನು ಕಾಂಗ್ರೆಸ್​ಗೆ ಸೇರ್ಪಡೆಗೊಳಿಸಲಿದ್ದಾರೆ. ಲೋಕ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅವರ ಕಾಂಗ್ರೆಸ್ ಸೇರ್ಪಡೆ ತಾಲೂಕಿನಲ್ಲಿ ಚರ್ಚೆಯ ವಿಷಯವಾಗಿದೆ.

ಗುರವಾರ ಬನವಾಸಿಯಲ್ಲಿ ನಡೆಯುವ ಕಾರ್ಯಕ್ರಮ ಮುಗಿಸಿ ಬೆಂಗಳೂರಿನಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಪುತ್ರನ ಸೇರ್ಪಡೆ ಮೂಲಕ ಹೆಬ್ಬಾರ್ ಅವರ ಪಕ್ಷಾಂತರ ಬಹುತೇಕ ನಿಶ್ಚಿತ ಎನ್ನಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net