ಸರ್ಕಾರಿ ಬಸ್ ನಿಲ್ದಾಣಕ್ಕೆ ಶಾಸಕಿ ದಿಢೀರ್ ಭೇಟಿ

New Project (17)
Published on

ಸುಳ್ಯ: ನಗರದಿಂದ ವಿವಿಧ ಕಡೆಗಳಿಗೆ ತೆರಳುವ ಬಸ್ಸುಗಳು ಸರಿಯಾದ ಸಮಯದಲ್ಲಿ ಸಂಚರಿಸದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ಡಿಪೋ ಹಾಗೂ ಬಸ್ಸು ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಬಸ್ಸುಗಳ ಕೊರತೆ ಬಗ್ಗೆ ಅಧಿಕಾರಿಗಳಿಂದ ವಾಹಿತಿ ಪಡೆದುಕೊಂಡರು.

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು ಸರಿಯಾದ ಸಮಯಕ್ಕೆ ಬಸ್ಸು ಸೌಲಭ್ಯ ಕಲ್ಪಿಸಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬಸ್ಸು ವಾಡುವಂತೆ ತಿಳಿಸಿದರು. ವಿದ್ಯಾರ್ಥಿಗಳಿಗೆ ಬಸ್ಸುಗಳ ಸಮಸ್ಯೆ ಎದುರಾಗುತ್ತಿದ್ದು, ಈ ಬಗ್ಗೆ ಅನೇಕ ವಿದ್ಯಾರ್ಥಿಗಳು ಸಮಸ್ಯೆ ಹೇಳಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿಯ ಸಮಸ್ಯೆಗಳು ಕಂಡು ಬರದಂತೆ ಎಚ್ಚರಿಕೆ ವಹಿಸಬೇಕೆಂದರು.

ಶಾಸಕಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಸಂದರ್ಭ ಸ್ಥಳದಲ್ಲಿಯೇ ಹಲವಾರು ವಿದ್ಯಾರ್ಥಿಗಳು, ಮಹಿಳೆಯರು, ಶಾಸಕರ ಜತೆ ಸಮಸ್ಯೆ ಹೇಳಿಕೊಂಡರು. ಮುಖಂಡರಾದ ಎನ್.ಎ.ರಾಮಚಂದ್ರ, ಎಸ್.ಎನ್.ಮನ್ಮಥ, ರಂಜನ್, ಪ್ರಸಾದ್ ಕಾಟೂರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net