ಗಣೇಶೋತ್ಸವದಲ್ಲಿ ಕುಣಿದು ಕುಪ್ಪಳಿಸಿದ ಸುರೇಶಗೌಡ, ಜ್ಯೋತಿಗಣೇಶ್​

suresh_Dannce
Published on

ತುಮಕೂರು: ಹಿಂದು ಮಹಾಗಣಪತಿ ಮೆರವಣಿಗೆಯಲ್ಲಿ ಚಂಡೆ ಸದ್ದಿಗೆ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ, ಜಿ.ಬಿ.ಜ್ಯೋತಿಗಣೇಶ್​, ಸಮಿತಿ ಅಧ್ಯಕ್ಷ ವೈ.ಎಚ್​.ಹುಚ್ಚಯ್ಯ ಕುಣಿದು ಎಲ್ಲರನ್ನು ಹುರಿದುಂಬಿಸಿದರು.

ನಗರದಲ್ಲಿ ವಿಶ್ವ ಹಿಂದು ಪರಿಷತ್​, ಬಜರಂಗದಳದ ವತಿಯಿಂದ 8ನೇ ವರ್ಷದ ಹಿಂದು ಮಹಾಗಣಪತಿ ವಿಸರ್ಜನಾ ಮಹೋತ್ಸವದಲ್ಲಿ ಶುಕ್ರವಾರ ಜನಪದ ಕಲಾ ತಂಡಗಳ ವಾದ್ಯಗಳಿಗೆ ಭರ್ಜರಿ ಸ್ಟೆಪ್ಸ್​ ಹಾಕಿದ ಶಾಸಕರ ಕುಣಿತದಿಂದ ಪ್ರೇರಿತರಾದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net