ತಂದೆ ಜನ್ಮದಿನದ ಪ್ರಯುಕ್ತ ಉಚಿತ ಆರೋಗ್ಯ ಶಿಬಿರ ಆಯೋಜನೆ

ಆರೋಗ್ಯ ಶಿಬಿರಕ್ಕೆ ಹಲವು ಪ್ರತಿಷ್ಠಿತ ಆಸ್ಪತ್ರೆಗಳಿಂದ 300ಕ್ಕೂ ಹೆಚ್ಚು ತಜ್ಞ ವೈದ್ಯರು ಆಗಮಿಸಲಿದ್ದು, 10 ಸಾವಿರಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬುಧವಾರ ಬೆಳಿಗ್ಗೆ 8 ಗಂಟೆಗೆ ಶಿಬಿರ ಆರಂಭವಾಗಲಿದ್ದು, ಸಂಜೆ 6 ಗಂಟೆವರೆಗೂ ನಡೆಯಲಿದೆ. ಈಗಾಗಲೇ 1.5 ಕೋಟಿ ಮೌಲ್ಯದ ಔಷಧ ಸಂಗ್ರಹ ಮಾಡಿಕೊಳ್ಳಲಾಗಿದೆ
12_HSN_06
ಮಾಜಿ ಶಾಸಕ ದಿ. ಎಚ್.ಎಸ್ ಪ್ರಕಾಶ್ ಅವರ 72ನೇ ಹುಟ್ಟುಹಬ್ಬದ ಸ್ಮರಣಾರ್ಥ ಬುಧವಾರ ನಗರದ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ ಬೃಹತ್ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಮಂಗಳವಾರ ಶಾಸಕ ಎಚ್.ಪಿ.ಸ್ವರೂಪ್ ಶಿಬಿರದ ಸಿದ್ಧತೆ ಹಾಗೂ ಔಷಧ ಸಂಗ್ರಹ ಪರಿಶೀಲನೆ ನಡೆಸಿದರು. ಈ ವೇಳೆ ಜೆಡಿಎಸ್ ಮಾಧ್ಯಮ ವಕ್ತಾರ ಹೊಂಗೆರೆ ರಘು ಸೇರಿ ಜೆಡಿಎಸ್ ಮುಖಂಡರು ಇದ್ದರು.
Published on

ಹಾಸನ: ಮಾಜಿ ಶಾಸಕ ದಿ. ಎಚ್.ಎಸ್ ಪ್ರಕಾಶ್ ಅವರ 72ನೇ ಹುಟ್ಟುಹಬ್ಬದ ಸ್ಮರಣಾರ್ಥ ಬುಧವಾರ ನಗರದ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ ಬೃಹತ್ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಶಾಸಕ ಎಚ್.ಪಿ.ಸ್ವರೂಪ್ ಮಂಗಳವಾರ ಶಿಬಿರದ ಸಿದ್ಧತೆ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಶಿಬಿರಕ್ಕೆ ಹಲವು ಪ್ರತಿಷ್ಠಿತ ಆಸ್ಪತ್ರೆಗಳಿಂದ 300ಕ್ಕೂ ಹೆಚ್ಚು ತಜ್ಞ ವೈದ್ಯರು ಆಗಮಿಸಲಿದ್ದು, 10 ಸಾವಿರಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬುಧವಾರ ಬೆಳಿಗ್ಗೆ 8 ಗಂಟೆಗೆ ಶಿಬಿರ ಆರಂಭವಾಗಲಿದ್ದು, ಸಂಜೆ 6 ಗಂಟೆವರೆಗೂ ನಡೆಯಲಿದೆ. ಈಗಾಗಲೇ 1.5 ಕೋಟಿ ಮೌಲ್ಯದ ಔಷಧ ಸಂಗ್ರಹ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಾರಿಗೆ ವ್ಯವಸ್ಥೆ

ಉಚಿತ ತಪಾಸಣೆ, ಔಷಧ ಹಾಗು ಊಟದ ವ್ಯವಸ್ಥೆ ಮಾಡಲಾಗಿದೆ. ಗ್ರಾಮೀಣ ಭಾಗದಿಂದ ಬರುವ ಜನರನ್ನು ಕರೆತರಲು ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಶಿಬಿರದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಸೇರಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಶಿಜರದಲ್ಲಿ ಹೃದ್ರೋಗ ತಜ್ಞರು, ಪಿತ್ತ ಜನಕಾಂಗ ತಜ್ಞರು, ಗರ್ಭಿಣಿ ಮತ್ತು ಸ್ತ್ರೀ ರೋಗ, ಮಕ್ಕಳ ತಜ್ಞರು, ನರರೋಗ, ಕ್ಯಾನ್ಸರ್ ತಪಾಸಣೆ ನಡೆಲಿದೆ. ಉಚಿತವಾಗಿ ಇಸಿಜಿ, ಎಕೋ ಸ್ಕಾೃನಿಂಗ್, ರಕ್ತ ಮತ್ತು ಮೂತ್ರ ಪರೀಕ್ಷೆ, ಕಣ್ಣಿನ ಶಸ್ತ್ರ ಚಿಕಿತ್ಸೆ ಮತ್ತು ಮಸೂರ ಅಳವಡಿಕೆ ಹಾಗು ಉಚಿತ ಕನ್ನಡಕ ವಿತರಣೆ ಮಾಡಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net