ಶೋಭಾಯಾತ್ರೆಯಲ್ಲಿ ಶಾಸಕ ಖಡ್ಗ ಪ್ರದರ್ಶನ

raichur
raichur
Published on

ರಾಯಚೂರು ನಗರದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ ಹಿಂದು ಮಹಾ ಗಣಪತಿ ಶೋಭಾಯಾತ್ರೆಯಲ್ಲಿ ಮಂಗಳವಾರ ಸಂಜೆ ಶಾಸಕ ಡಾ.ಶಿವರಾಜ ಪಾಟೀಲ್ ಖಡ್ಗ ಪ್ರದರ್ಶನ ಮಾಡಿದ ವಿಡಿಯೋ ಹಾಗೂ ಪೋಟೊ ಎಲ್ಲೆಡೆ ವೈರಲ್ ಆಗಿದೆ.

ಭಜರಂಗದಳ ಕಾರ್ಯಕರ್ತರಿಂದ ನಗರದ ಗುಜಾರಾತಿ ಕಲ್ಯಾಣ ಮಂಟಪದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ ಹಿಂದು ಮಹಾಗಣಪತಿ ಶೋಭಾಯಾತ್ರೆ ಹಾಗೂ ವಿಸರ್ಜನೆ ವೇಳೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ ಸಂದರ್ಭದಲ್ಲಿ ಶಾಸಕ ಡಾ.ಶಿವರಾಜ ಪಾಟೀಲ್ ಬೆಂಬಲಿಗರೊಂದಿಗೆ ನೃತ್ಯ ಮಾಡಿಕೊಂಡು ಖಡ್ಗ ಪ್ರದರ್ಶನ ಮಾಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆದರೆ ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲವೆಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net