

ಮೈಸೂರು: ಚುನಾವಣಾ ಆಯೋಗ ಹಾಗೂ ಚುನಾವಣಾ ಆಯುಕ್ತರು ರಾಜಕೀಯ ಪುಡಾರಿ ಎಂಬ ಹೇಳಿಕೆ ನೀಡಿದ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಶ್ರೀವತ್ಸ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಚುನಾವಣಾ ಆಯೋಗದ ಬಗ್ಗೆ ಕಾಂಗ್ರೆಸ್ಸಿಗರು ಯಾವುದೇ ಚಕಾರ ಎತ್ತುವುದಿಲ್ಲ. ಆದರೆ ಚುನಾವಣೆಯಲ್ಲಿ ಸೋಲುಂಟಾದಾಗ ಚುನಾವಣಾ ಆಯೋಗದ ಆರೋಪ ಮಾಡುವುದು ಸರಿಯಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸಿ ಅಧಿಕಾರಕ್ಕೆ ಬಂದಿದ್ದು, ಆಗ ಮತಯಂತ್ರ ಸರಿಯಾಗಿತ್ತೇ? ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ಮತಯಂತ್ರ ಸರಿಯಾಗಿಲ್ಲವೇ? ಎಂದು ಪ್ರಶ್ನಿಸಿದ ಅವರು, ಪದೇ ಪದೇ ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ಸಿಗರು ಈ ಮೂಲಕ ಚುನಾವಣಾ ಆಯೋಗದ ಕಾರ್ಯಕ್ಷಮತೆ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈಗಿನ ರಾಜಕೀಯ ಪರಿಸ್ಥಿತಿ ನೋಡಿದರೆ ಖಂಡಿತವಾಗಿಯೂ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಆಗುತ್ತದೆ. ಅಂತಹ ಎಲ್ಲ ಬೆಳವಣಿಗೆಗಳು ಕಾಣುತ್ತಿವೆ. ನವೆಂಬರ್ ಕ್ರಾಂತಿಯಂತೂ ಆಗಿಯೇ ಆಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಮೋಹನ್, ಕೇಬಲ್ ಮಹೇಶ್, ಗೋಪಾಲ್ ರಾಜೇ ಅರಸ್, ಜಯರಾಮ್, ಮಹೇಶ್ ರಾಜೇ ಅರಸ್, ಗೋಕುಲ್ ಗೋವರ್ಧನ್, ಪ್ರದೀಪ್ ಇದ್ದರು
--------------