ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ ಶಾಸಕ

16 HANUR 1
?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಹನೂರು: ತಾಲೂಕಿನ ಬಸಪ್ಪನದೊಡ್ಡಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಾಸಕ ಎಂ.ಆರ್. ಮಂಜುನಾಥ್ ಅವರು ಒಂದನೇ ತರಗತಿ ಇಂಗ್ಲಿಷ್ ಮಾಧ್ಯಮ ಕೊಠಡಿಯನ್ನು ಉದ್ಘಾಟಿಸಿ, ಪುಟಾಣಿಗಳಿಗೆ ಅಕ್ಷರಾಭ್ಯಾಸ ಮಾಡಿಸಿದರು.

ಈ ವೇಳೆ ಶಾಸಕರು ಮಾತನಾಡಿ, ರಾಜ್ಯದಲ್ಲಿ ಮಾತೃ ಭಾಷೆ ಕನ್ನಡಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡದ ಜತೆಗೆ ಇಂಗ್ಲಿಷ್ ಭಾಷೆಯು ಅವಶ್ಯಕವಾಗಿದೆ. ಹಾಗಾಗಿ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಯನ್ನು ಆರಂಭಿಸಿರುವುದು ಮಕ್ಕಳ ಕಲಿಕೆಗೆ ವರದಾನವಾಗಿದೆ. ಈ ಬಗ್ಗೆ ಪಾಲಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಂಗ್ಲ ಮಾಧ್ಯಮದ ಶಿಕ್ಷಣದಿಂದ ಮಕ್ಕಳ ಜ್ಞಾನಾರ್ಜನೆ ಹಾಗೂ ಕಲಿಕೆ ಹೆಚ್ಚಾಗಲಿದೆ ಎಂದರು.

ಚೆನ್ನಾಗಿ ಓದುವಂತೆ ಶಾಸಕರು ಪುಟಾಣಿಗಳಿಗೆ ಸಲಹೆ ನೀಡಿದರು. ಶಾಲೆಯ ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಗ್ರಾಮಸ್ಥರು ಶಾಲಾ ಅವಧಿಗೆ ಅನುಗುಣವಾಗಿ ಹೆಚ್ಚುವರಿ ಬಸ್ ಬಿಡುವಂತೆ ಹಾಗೂ ಈ ಭಾಗದಲ್ಲಿನ ರಸ್ತೆ ಅಭಿವೃದ್ಧಿ ಪಡಿಸುವಂತೆ ಮನವಿ ಮಾಡಿದರು. ಇದಕ್ಕೆ ಶಾಸಕರು ಒತ್ತುವರಿಯಾಗಿರುವ ಜಾಗವನ್ನು ತೆರವುಗೊಳಿಸಿದರೆ ರಸ್ತೆ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಬಿಇಒ ಗುರುಲಿಂಗಯ್ಯ, ಎಸ್‌ಡಿಎಂಸಿ ಅಧ್ಯಕ್ಷ ಮಲ್ಲೇಶ್, ಮುಖ್ಯ ಶಿಕ್ಷಕ ವೀರಪ್ಪ, ಶಿಕ್ಷಕರಾದ ದೊರೆಸ್ವಾಮಿ, ಆನಂದ್, ಪುಟ್ಟರಾಮು, ಸೋಮಣ್ಣ, ಮಾಲಾ, ಸುಧಾಮಣಿ, ಮುತ್ತಮ್ಮ, ಮುಖಂಡರಾದ ವಿಜಯಕುಮಾರ್, ಮಹದೇವಪ್ರಸಾದ್, ಚಿನ್ನವೆಂಕಟ, ರಫೀಕ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net