ಹಳೇ ಬಸ್​ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಶಾಸಕ ಟೆಂಗಿನಕಾಯಿ

New Tanginakayhi New
Published on

ಹುಬ್ಬಳ್ಳಿ : ಸ್ಮಾರ್ಟ್ ಸಿಟಿ ಯೋಜನೆ ಅಡಿ ನಿಮಾಣವಾಗುತ್ತಿರುವ ಇಲ್ಲಿನ ಹಳೇ ಬಸ್ ನಿಲ್ದಾಣ ಕಟ್ಟಡದ ಪ್ರಗತಿಯಲ್ಲಿರುವ ಕಾಮಗಾರಿಯನ್ನು ಶಾಸಕ ಮಹೇಶ ಟೆಂಗಿನಕಾಯಿ ಬುಧವಾರ ಪರಿಶೀಲಿಸಿದರು. ಬಸ್ ನಿಲ್ದಾಣದ ಬಳಿ ನಿಲುಗಡೆಗೊಳ್ಳುವ ಆಟೋಗಳಿಗೆ ಸೂಕ್ತ ಜಾಗ ಗುರುತಿಸುವಂತೆ ಅಧಿಕಾರಿಗಳಿಗೆ ಶಾಸಕ ಟೆಂಗಿನಕಾಯಿ ಸೂಚಿಸಿದರು.

ನಿಲ್ದಾಣದಲ್ಲಿ ಪ್ರಯಾಣಿಕರ ಭದ್ರತೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಇನ್ನಿತರ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದರು.

ಡಿಸೆಂಬರ್​ವೊಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರರಿಗೆ ಸೂಚಿಸಿದರು.

ಸ್ಮಾರ್ಟ್​ಸಿಟಿ ಎಂಡಿ ರುದ್ರೇಶ ಗಾಳಿ, ವಿವಿಧ ಇಲಾಖೆಯ ಅಧಿಕಾರಿಗಳಾದ ಶ್ರೀನಿವಾಸ, ವಿವೇಕಾನಂದ, ಸಿದ್ಧಲಿಂಗೇಶ ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net