ಧಾರವಾಡದಲ್ಲಿ ಬಿಜೆಪಿ ಗೆಲುವು ನಿಶ್ಚಿತ, ಶಾಸಕ ಮಹೇಶ ಟೆಂಗಿನಕಾಯಿ ಹೇಳಿಕೆ

Published on

ಹುಬ್ಬಳ್ಳಿ: ಪ್ರಧಾನಿ ಮೋದಿ ಅವರು ಹತ್ತು ವರ್ಷ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ. ಧಾರವಾಡ ಕ್ಷೇತ್ರದಲ್ಲಿ ಜೋಶಿ ಅವರು ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ ಕುಲಕಣಿರ್ ಅವರ ವೈಯಕ್ತಿಕ ವಿಚಾರ ಏನೇ ಇರಬಹುದು. ಆದರೆ, ಜೋಶಿ ಅವರನ್ನು ಹಿಟ್ಲರ್ಗೆ ಹೋಲಿಸುವುದು ಸರಿಯಲ್ಲ ಎಂದರು.

ಶ್ರೀದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ಕಲ್ಪನೆಯಾಗಿದೆ. ನಾವು ಮತ್ತೆ ಅವರ ಮನವೊಲಿಸುವ ಕೆಲಸ ಮಾಡುತ್ತೇವೆ. ಅವರು ಚುನಾವಣೆಗೆ ನಿಲ್ಲುವುದಾದರೆ ನಾವೂ ಚುನಾವಣೆ ಎದುರಿಸುತ್ತೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net