ಯೋಗ ಸ್ಥಳ ಪರಿಶೀಲಿಸಿದ ಶಾಸಕ ಟೆಂಗಿನಕಾಯಿ

New Tenginakayi New
Published on

ಹುಬ್ಬಳ್ಳಿ : ವಿಶ್ವ ಯೋಗ ದಿನಾಚರಣೆ ಅಂಗವಾಗಿ ಬಿಜೆಪಿ ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವತಿಯಿಂದ ನೃಪತುಂಗ ಬೆಟ್ಟದಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬುಧವಾರದಂದು ಕಾರ್ಯಕ್ರಮದ ಸ್ಥಳ ಹಾಗೂ ವ್ಯವಸ್ಥೆ ಪರಿಶೀಲಿಸಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಜಗತ್ತಿನ ಎಲ್ಲ ರಾಷ್ಟ್ರಗಳಲ್ಲಿ ಜೂ. 21ರಂದು ಯೋಗ ದಿನ ಆಚರಿಸಲಾಗುತ್ತಿದೆ. ಜಗತ್ತಿಗೆ ಯೋಗ ಪರಿಚಯಿಸಿದ್ದು ಪ್ರಧಾನಿ ನರೇಂದ್ರ ಮೋದಿ ಅವರು. ಆ ದಿನದಂದು ಯೋಗಪಟುಗಳು ಹೆಚ್ಚಿನಲ್ಲಿ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಪ್ರಮುಖರಾದ ಸಿದ್ದು ಮೊಗಲಿಶೆಟ್ಟರ, ಈಶ್ವರಗೌಡ ಪಾಟೀಲ, ಚನ್ನು ಹೊಸಮನಿ, ಮಂಗಳಾ ಗೌಡ, ಸಬೀತಾ ರಾಜ್, ನರೇಶ ಬಾಫಟ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net