

ಮಂಗಳೂರು : ನಗರದ ಜ್ಯೋತಿ ಬಳಿ ನಿರ್ಮಾಣವಾಗಲಿರುವ ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ಅವರ ಭವ್ಯ ಪ್ರತಿಮೆ ಸಹಿತ ಆಕರ್ಷಕ ವೃತ್ತಕ್ಕೆ ಸಂಪೂರ್ಣ ಸಹಮತವಿದ್ದು ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದೆಂದು ಶಾಸಕ ವೇದವ್ಯಾಸ ಕಾಮತ್
ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾ ಒಕ್ಕೂಟ, ಮುಂಡಾಲ ಯುವ ವೇದಿಕೆ ಮಂಗಳೂರು, ಆದಿ ದ್ರಾವಿಡ ಸಮಾಜ ಸಂಘಟನೆಗಳು ಶಾಸಕರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂದರ್ಭ ಪ್ರತಿಕ್ರಿಯಿಸಿದ ಶಾಸಕರು ನಗರದ ಪ್ರಮುಖ ಭಾಗದಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ಸಹಿತ ವೃತ್ತ ನಿರ್ಮಿಸುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಇದು ಜವಾಬ್ದಾರಿಯೂ ಹೌದು. ಮೇಯರ್ ಸುಧೀರ್ ಶೆಟ್ಟಿ ಅವರು ಈ ನಿಟ್ಟಿನಲ್ಲಿ ವಿಶೇಷ ಗಮನ ಹರಿಸಿದ್ದಾರೆ. ಮಂಗಳೂರು ಸ್ಮಾರ್ಟ್ ಸಿಟಿಯಡಿ ಇದು ಕಾರ್ಯಗತಗೊಳ್ಳಲಿದ್ದು ವಿಶೇಷ ಆದ್ಯತೆಯ ಮೇರೆಗೆ ಶೀಘ್ರವಾಗಿ ಪೂರ್ಣಗೊಳ್ಳಲಿದೆ ಎಂದರು.