

ಮಂಗಳೂರು: ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಮಂಡಲ ಪ್ರಮುಖರ ಸಭೆ ಶುಕ್ರವಾರ ಜರುಗಿತು.
ಪ್ರಧಾನಿ ಆಗಮನ ಸಂದರ್ಭ ಮಂಗಳೂರು ನಗರ ದಕ್ಷಿಣದಿಂದ ಸಾವಿರಾರು ಜನರನ್ನು ಸೇರಿಸುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮನೆ ಮನೆ ಭೇಟಿ ಮಾಡುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಭಾಗವಹಿಸುವ ದೃಷ್ಟಿಯಿಂದ ಈಗಾಗಲೇ ಸಿದ್ಧತೆ ಪ್ರಾರಂಭವಾಗಿದೆ ಎಂದು ಶಾಸಕ ಕಾಮತ್ ಹೇಳಿದರು.
ಸಭೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮೋನಪ್ಪ ಭಂಡಾರಿ, ಮಂಡಲ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೂಪಾ ಡಿ.ಬಂಗೇರ, ಸುರೇಂದ್ರ ಜಪ್ಪಿನಮೊಗರು ಹಾಗೂ ಬಿಜೆಪಿಯ ಇತರ ಪ್ರಮುಖರು ಉಪಸ್ಥಿತರಿದ್ದರು.