

ಮಂಗಳೂರು : ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ಏರಿಕೆಯ ಬಿಸಿಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಮಾತ್ರ ತನ್ನ ಪಾಡಿಗೆ ತಾನು ಜನರನ್ನು ದೋಚುವುದರಲ್ಲಿ ನಿರತವಾಗಿದೆ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಟೀಕಿಸಿದ್ದಾರೆ.
ಬೆಲೆ ಏರಿಸುವುದರಲ್ಲಿ ಹಠಕ್ಕೆ ಬಿದ್ದಿರುವಂತೆ ವರ್ತಿಸುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಅತ್ತ ರೈತರ ಬದುಕಿಗೂ
ಉಪಕಾರಿಯಾಗಿಲ್ಲ. ಬಡವರ ಬದುಕಿಗೂ ನೆಮ್ಮದಿಯಿಲ್ಲ. ಒಂದೆಡೆ ಹಾಲು ಉತ್ಪಾದಕರಿಗೆ ಬಾಕಿ ಉಳಿಸಿರುವ ಸಬ್ಸಿಡಿ ಹಣ ನೀಡದೆ ಸತಾಯಿಸುತ್ತಿದೆ. ಇನ್ನೊಂದೆಡೆ ಗ್ರಾಹಕರಿಗೆ ಹಾಲಿನ ಬೆಲೆಯೇರಿಕೆ ಮೂಲಕ ಬಿಸಿ ಮುಟ್ಟಿಸಿದೆ. ಇದು ರೈತ ವಿರೋಧಿ ಸರ್ಕಾರವೂ ಹೌದು. ಬಡ ಜನರ ವಿರೋಧಿ ಸರ್ಕಾರವೂ ಹೌದು. ಬೆಲೆ ಏರಿಕೆಗೆ ನಿಯಂತ್ರಣ ಹೇರಿ ಜನಸಾಮಾನ್ಯರು ನೆಮ್ಮದಿಯಿಂದ ಇರಲು ಬಿಡಿ ಎಂದು ಶಾಸಕರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
..................................