ಸಿಎಂ ರಾಜೀನಾಮೆ ನೀಡುವ ಕಾಲ ಸನ್ನಿಹಿತ -ಶಾಸಕ ವೇದವ್ಯಾಸ ಕಾಮತ್

allwyn_130820_kamath
Published on


ಮಂಗಳೂರು : ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ. ಇಷ್ಟು ದಿನ ನಾನು ಯಾವುದೇ ತಪ್ಪು ಮಾಡಿಲ್ಲ ಎನ್ನುತ್ತಾ ಇದೀಗ ಪ್ರಕರಣ ಬಿಗಿಯಾಗುತ್ತಾ ಹೋದಂತೆ ಅಕ್ರಮವಾಗಿ ಪಡೆದಿರುವ ನಿವೇಶನಗಳನ್ನು
ತಮ್ಮ ಪತ್ನಿಯವರಿಂದ ಹಿಂದಿರುಗಿಸುವ ನಿರ್ಧಾರ ಪ್ರಕಟಿಸಿರುವುದೇ ಇದಕ್ಕೆ ಸಾಕ್ಷಿ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಇದು ಬಿಜೆಪಿ-ಜೆಡಿಎಸ್ ಸಂಘಟಿತವಾಗಿ ನಡೆಸಿದ ಮೈಸೂರು ಚಲೋ ಪಾದಯಾತ್ರೆಗೆ ಸಿಕ್ಕಿರುವ ಜಯವಾಗಿದೆ.ನಾನು ಯಾರಿಗೂ ಜಗ್ಗಲ್ಲ ಬಗ್ಗಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯನವರನ್ನು ಇದೀಗ ನ್ಯಾಯ ವ್ಯವಸ್ಥೆಯೇ ತಲೆಬಾಗಿಸಿದೆ. ಅದುವೇ ಈ ದೇಶದ ಪ್ರಜಾಪ್ರಭುತ್ವ ಹಾಗೂ ನ್ಯಾಯಾಂಗ ವ್ಯವಸ್ಥೆಯ ಶಕ್ತಿ . ಸಿದ್ದರಾಮಯ್ಯನವರು ಇನ್ನಾದರೂ ತಮ್ಮ ಮೊಂಡು ಹಠ ಬಿಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪ್ರಾಮಾಣಿಕವಾಗಿ ತನಿಖೆ ಎದುರಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net