ವಿಪಕ್ಷದ ನಾಯಕರಿಗೆ ರಕ್ಷಣೆ ಇಲ್ಲದ ಸ್ಥಿತಿ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

allwyn_130820_kamath
Published on


ಮಂಗಳೂರು : ಸಾಂವಿಧಾನಿಕ ಹುದ್ದೆಯಲ್ಲಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಹಾಗೂ ಶೋಷಿತ ಸಮುದಾಯಗಳ
ಪ್ರಬಲ ಧ್ವನಿಯಾಗಿರುವ ಛಲವಾದಿ ನಾರಾಯಣಸ್ವಾಮಿ ಅವರು ಕಲಬುರಗಿಯ
ಚಿತ್ತಾಪುರದ ಅತಿಥಿ ಗೃಹದಲ್ಲಿ ಕಾಂಗ್ರೆಸ್‌ನ ಗೂಂಡಾ ಬೆಂಬಲಿಗರಿಂದ ದಿಗ್ಬಂಧನಕ್ಕೊಳಗಾದ ಘಟನೆ ಅತ್ಯಂತ ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರು ವಿಪಕ್ಷದ ನಾಯಕರೊಬ್ಬರಿಗೆ ರಕ್ಷಣೆ ನೀಡಲಾಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಬಂದೊದಗಿದೆ ಎಂದರೆ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನತೆಯ ರಕ್ಷಣೆಯನ್ನು ನಿರೀಕ್ಷಿಸುವುದು ಹೇಗೆ? ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದ್ದು
ಪ್ರಜಾಪ್ರಭುತ್ವ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಎಲ್ಲಾ ಆಶಯಗಳನ್ನು ಗಾಳಿಗೆ ತೂರಲಾಗಿದೆ. ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣಿಗಳು ಸಹಜ. ಅದನ್ನು ಸ್ವೀಕರಿಸಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು. ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಘಟನೆಗೆ ಕಾರಣರಾದವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕ ಕಾಮತ್ ಒತ್ತಾಯಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net