

ಕುಶಾಲನಗರ: ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಸಂತ್ರಸ್ತರಿಗೆ ತಾತ್ಕಾಲಿಕವಾಗಿ ವಾಸಿಸಲು ಬೇಕಾದ ವ್ಯವಸ್ಥೆ, ಆಹಾರ ಪದಾರ್ಥಗಳನ್ನು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ 2 ಬಡ ಕುಟುಂಬಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಕುಶಾಲನಗರ ತಹಸೀಲ್ದಾರ್ ಕಿರಣ್ ಗೋರಯ್ಯ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಗ್ರಾಪಂ ಅಧ್ಯಕ್ಷರು, ಸದಸ್ಯರು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.