ದತ್ತ ಮೂರ್ತಿ ಭಗ್ನ ಘಟನೆ, ಕಿಡಿಗೇಡಿಗಳ ಪತ್ತೆಗೆ ಶಾಸಕರ ಒತ್ತಾಯ

h6- Datt murty 1
Published on

ಹುಬ್ಬಳ್ಳಿ: ಇಲ್ಲಿಯ ದೇಶಪಾಂಡೆನಗರದ ಅಪಾರ್ಟ್​ವೆುಂಟ್ ಆವರಣದ ದೇವಸ್ಥಾನದಲ್ಲಿ ದತ್ತ ಮೂರ್ತಿ ಭಗ್ನಗೊಳಿಸಿರುವುದು ಭಕ್ತರ ಭಾವನೆಗೆ ಧಕ್ಕೆಯುಂಟು ಮಾಡಿದೆ. ಕೂಡಲೇ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.

ಘಟನೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅವರು, ಪರಿಶೀಲಿಸಿದರು. ಹಿಂದುಗಳ ಹಬ್ಬದ ಸಂದರ್ಭದಲ್ಲಿ ದುಷ್ಕರ್ವಿುಗಳು ದತ್ತ ವಿಗ್ರಹವನ್ನು ಭಗ್ನಗೊಳಿಸಿದ್ದು ಹೇಯ ಕೃತ್ಯ. ತನಿಖೆ ಕೈಗೊಂಡು ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು. ಈ ಕೃತ್ಯದ ಹಿಂದೆ ಯಾರ ಕೈವಾಡ ಇದೆ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಪೊಲೀಸರಿಗೆ ಒತ್ತಾಯಿಸಿದರು.

ಪಾಲಿಕೆ ಸದಸ್ಯೆ ರೂಪಾ ಶೆಟ್ಟಿ, ಬಿಜೆಪಿ ವಕ್ತಾರ ರವಿ ನಾಯಕ, ಮುಖಂಡರು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net