ಗಾರ್ಮೆಂಟ್ಸ್ ಮಹಿಳೆಯರಿಗಾಗಿ ಬಸ್ ಸೇವೆ: ಶಾಸಕ ರವಿಕುಮಾರ್ ಗಣಿಗ ಚಾಲನೆ

MLA visits Garments Mandya
Published on

ಮಂಡ್ಯ: ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದ ಬಾಲಾಜಿ ಮತ್ತು ಶಾಹಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಅನುಕೂಲವಾಗುವಂತೆ ಬಸ್ ಸೌಲಭ್ಯ ಒದಗಿಸಲಾಗಿದೆ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.

ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿರುವ ಗಾರ್ಮೆಂಟ್ಸ್‌ಗೆ ಭೇಟಿ ಮಹಿಳೆಯರಿಂದ ಮಾಹಿತಿ ಪಡೆದು ಬಳಿಕ ಕೆಎಸ್‌ಆರ್‌ಟಿಸಿ ವತಿಯಿಂದ ಎರಡು ಬಸ್ ಸೇವೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳಾ ನೌಕರರನ್ನು ಗೂಡ್ಸ್ ಆಟೋಗಳಲ್ಲಿ ಪ್ರಾಣಿಗಳ ರೀತಿ ತುಂಬಿಕೊಂಡು ಪ್ರಯಾಣಿಸುವುದು ನಿಯಮದ ಪ್ರಕಾರ ನಿಷೇಧ. ಒಂದು ತಿಂಗಳು ಕಾಲ ಗಾರ್ಮೆಂರ್ಟ್ಸ್ ಆಡಳಿತ ಮಂಡಳಿಗೆ ಗಡುವು ನೀಡಿದ್ದು, ಪರ್ಯಾಯ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಸಧ್ಯಕ್ಕೆ ನಿಗಮದಿಂದ ತಾತ್ಕಾಲಿಕವಾಗಿ ಎರಡು ಬಸ್ ಸೇವೆ ಕಲ್ಪಿಸಿದ್ದು, ಅದರ ಸದುಪಯೋಗಪಡೆದುಕೊಳ್ಳಬೇಕು. ಅಂತೆಯೇ ಊಟದ ವ್ಯವಸ್ಥೆಗಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲ್ಲಿದ್ದೇವೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಬಾಲಾಜಿ ಗಾರ್ಮೆಂಟ್ಸ್ ವ್ಯವಸ್ಥಾಪಕ ನಿರ್ದೇಶಕ ಕೆ.ಟಿ.ಕುಮಾರ್, ಸಿಇಒ ಮೋನಿಶ್‌ಕುಮಾರ್, ವ್ಯವಸ್ಥಾಪಕ ಶ್ರೀಧರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net