ಗುರುಗಳನ್ನು ಗೌರವಿಸುವ ರೂಢಿ ಮುಂದುವರಿಯಲಿ

MLA Vitthala Katakadhonda, Teacher's Day Celebration, Chadchan,
ಚಡಚಣದ ಗುರುಕೃಪಾ ಮಂಗಲ ಕಾರ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು, ಶ್ರೀಗಳು ಉದ್ಘಾಟಿಸಿದರು. ಶಾಸಕ ವಿಠ್ಠಲ ಕಟಕಧೋಂಡ, ತಹಸೀಲ್ದಾರ್ ಸಂಜಯ ಇಂಗಳೆ, ಅಮೃತಾನಂದ ಸ್ವಾಮಿಗಳು ಇತರರಿದ್ದರು.
Published on

ಚಡಚಣ: ಮಕ್ಕಳಿಗೆ ಅಕ್ಷರ ಜ್ಞಾನ ನೀಡುವುದರೊಂದಿಗೆ ಉತ್ತಮ ಆಚಾರ, ವಿಚಾರ ಕಲಿಸುವ ಶಿಕ್ಷಕರಿಗೆ ಸಮಾಜದಲ್ಲಿ ಉನ್ನತ ಸ್ಥಾನವಿದೆ. ಅವರನ್ನು ನಾವೆಲ್ಲರೂ ಗೌರವಿಸುವ ರೂಢಿ ಮುಂದುವರಿಸಿಕೊಂಡು ಹೋಗೋಣ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಅವರು ಹೇಳಿದರು.

ಪಟ್ಟಣದ ಗುರುಕೃಪಾ ಮಂಗಲ ಕಾರ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಹಸೀಲ್ದಾರ್ ಸಂಜಯ ಇಂಗಳೆ ಮಾತನಾಡಿ, ಶಿಕ್ಷಕ ರಾಷ್ಟ್ರ ರಕ್ಷಕ ಹಾಗೂ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದೆ ಎಂದರು.

ತಾಪಂ ಇಒ ಸಂಜಯ ಖಡಗೇಕರ ಮಾತನಾಡಿ, ಜಗತ್ತಿನ ಯಾವ ಅಧಿಕಾರಿಗಳಿಗೂ ಸಹ ಬ್ರಹ್ಮ, ವಿಷ್ಣು, ಮಹೇಶ್ವರ ಎಂದು ಕರೆದಿಲ್ಲ. ಆದರೆ ಶಿಕ್ಷಕರಿಗೆ ಮಾತ್ರ ಗುರುಬ್ರಹ್ಮ, ಗುರುವಿಷ್ಣು, ಗುರುಮಹೇಶ್ವರ ಎಂದು ಕರೆಯಲಾಗಿದೆ ಎಂದರು.

ಬಿಇಒ ಎಸ್.ಜೆ.ನಾಯಕ ಮಾತನಾಡಿದರು. ಸಾನ್ನಿಧ್ಯ ವಹಿಸಿದ್ದ ಅಮೃತಾನಂದ ಸ್ವಾಮಿಗಳು ಆಶೀರ್ವಚನ ನೀಡಿದರು. ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರು ಹಾಗೂ 2023ರಲ್ಲಿ ನಿವೃತ್ತಿ ಹೊಂದಿದ ತಾಲೂಕಿನ ಪ್ರೌಢ-ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸನ್ಮಾನಿಸಲಾಯಿತು, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಸ್.ಸೊನಗಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಎಸ್.ಮಜ್ಜಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸಂಘದ ಅಧ್ಯಕ್ಷ ಎಸ್.ಎಸ್.ಪಾಟೀಲ, ಪ್ರೌಢಶಾಲೆ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಜಿ.ಮುಚ್ಚಂಡಿ, ಎಲ್.ಎಸ್.ಶಿರಶ್ಯಾಡ, ಎ.ಎಸ್.ಕರ್ಜಗಿ, ಆರ್.ಎಂ.ಭಂಡಿ, ಎಸ್.ಎಂ.ಬಳ್ಳೊಳ್ಳಿ, ಶಂಕರ ಹಾವಿನಾಳ ಸೇರಿದಂತೆ ಶಿಕ್ಷಕರ ಸಂಘಟನೆಯ ವಿವಿಧ ಹಂತದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net