ಕಾಂಕೀಟ್ ರಸ್ತೆ ಉದ್ಘಾಟಿಸಿದ ಶಾಸಕ

2-npik-4.
Published on


ಕೊಡಗು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ನಾಪೋಕ್ಲುವಿನ ಚರಿಯಪರಂಬು- ಕಲ್ಲು ಮೊಟ್ಟೆ ಕಾಂಕ್ರೀಟ್ ರಸ್ತೆಯನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.

ನನ್ನ ಅವಧಿಯಲ್ಲಿ ರಸ್ತೆ ಕಾಮಗಾರಿ ಕಳಪೆಯಾಗಲು ಬಿಡುವುದಿಲ್ಲ. ಗ್ರಾಮಸ್ಥರಿಗೆ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸುವ ಅಧಿಕಾರವಿದೆ. ಒಂದು ವೇಳೆ ಕಾಮಗಾರಿ ಕಳಪೆಯಾಗಿದ್ದರೆ ಇಲಾಖೆಯ ಇಂಜಿನಿಯರ್ಸ್ ಪರಿಶೀಲಿಸಿ ಮಾಹಿತಿ ನೀಡುತ್ತಾರೆ. ಏನೇ ಸಂಶಯಗಳಿದ್ದರೂ ನನ್ನ ಗಮನಕ್ಕೆ ತನ್ನಿ. ಕಾಮಗಾರಿ ಗುಣಮಟ್ಟದಿಂದ ಇಲ್ಲದಿದ್ದರೆ ಹಣ ಬಡುಗಡೆಯಾಗುವುದಿಲ್ಲ ಎಂದರು.

ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ ಅರುಣ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಕೆ.ಎ., ಕಾಂಗ್ರೆಸ್ ವಲಯ ಅಧ್ಯಕ್ಷ ಮಾಚೇಟಿರ ಕುಶ ಕುಶಾಲಪ್ಪ, ಕಾಂಗ್ರೆಸ್ ಬ್ಲಾಕ್ ಯೂತ್ ಅಧ್ಯಕ್ಷ ಸಿರಾಜ್, ಕಾಂಗ್ರೆಸ್ ಕಾರ್ಯಕರ್ತರು, ಗ್ರಾಮ ಪಂಚಾಯಿತಿ ಸದಸ್ಯರು , ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net