ಕಾಂಪೌಂಡ್ ಕಾಮಗಾರಿ ವೀಕ್ಷಿಸಿದ ಶಾಸಕ

15blrp4
ಬೇಲೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಕಾಂಪೌಂಡ್ ಕಾಮಗಾರಿಯನ್ನು ಶಾಸಕ ಎಚ್.ಕೆ.ಸುರೆಶ್ ವೀಕ್ಷಿಸಿದರು. ತೀರ್ಥಕುಮಾರಿ ವೆಂಕಟೇಶ್, ಎಂ.ಮಮತಾ, ಎಸ್.ಡಿ.ಮಂಜುನಾಥ್, ಜಮಾಲುದ್ದೀನ್ ಇದ್ದರು.
Published on

ಬೇಲೂರು: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಸುತ್ತಲೂ ಪುರಸಭೆಯಿಂದ ನಿರ್ಮಿಸುತ್ತಿರುವ ಕಾಂಪೌಂಡ್ ಕಾಮಗಾರಿಯನ್ನು ಶಾಸಕ ಎಚ್.ಕೆ.ಸುರೇಶ್, ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಶುಕ್ರವಾರ ಪರಿಶೀಲಿಸಿದರು.

ಶಾಸಕ ಎಚ್.ಕೆ.ಸುರೆಶ್ ಮಾತನಾಡಿ, ಪುರಸಭೆ ಅಧ್ಯಕ್ಷರು ಮತ್ತು ಸದಸ್ಯರು, ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರ ಒತ್ತಾಸೆಯಂತೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನಕ್ಕೆ 30 ಲಕ್ಷ ರೂ. ವೆಚ್ಚದಲ್ಲಿ ಕಾಂಪೌಂಡ್ ನಿರ್ಮಿಸುಸಲಾಗುತ್ತಿದೆ. ಪಟ್ಟಣ ತಾಲೂಕು ಆಡಳಿತ ಸೌಧದ ಕಾಂಪೌಂಡ್ ಮಾದರಿಯಲ್ಲಿ ಕಾಲೇಜು ಕಾಂಪೌಂಡ್ ನಿರ್ಮಾಣವಾಗಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ತಹಸೀಲ್ದಾರ್ ಎಂ.ಮಮತಾ, ಮುಖ್ಯಾಧಿಕಾರಿ ಎಸ್.ಡಿ.ಮಂಜುನಾಥ್, ಸದಸ್ಯ ಜಮಾಲುದ್ದೀನ್ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net