ವೈಭವಿ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ

Sanmaana
ಪಿಯುಸಿಯಲ್ಲಿ ದ್ವಿತೀಯ ಸ್ಥಾನ ಗಳಿಸಿದ ವೈಭವಿ ಆಚಾರ್ಯಳನ್ನು ಶಾಸಕ ಯಶ್​ಪಾಲ್​ ಸುವರ್ಣ ಸನ್ಮಾನಿಸಿದರು. ಜಯಂತಿ ಪೂಜಾರಿ, ದಿನೇಶ್​ ಅಮೀನ್​, ಜಗದೀಶ್​ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಶಂಖಪಾಲ ಆಚಾರ್ಯ, ವಿದ್ಯಾ ಎಸ್​. ಆಚಾರ್ಯ ಇತರರಿದ್ದರು.
Published on

ಶಾಸಕ ಯಶ್​ಪಾಲ್​ ಸುವರ್ಣ ಆಶಯ -- ವಿದ್ಯಾರ್ಥಿನಿಗೆ ಪ್ರತಿಭಾ ಪುರಸ್ಕಾರ

ಉಡುಪಿ: ನಿರಂತರ ಪರಿಶ್ರಮದಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉನ್ನತ ಅಂಕಗಳಿಸಿರುವ ವೈಭವಿ ಆಚಾರ್ಯ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಆಕೆಯ ಸಾಧನೆ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿ ಎಂದು ಶಾಸಕ ಯಶ್​ಪಾಲ್​ ಸುವರ್ಣ ಆಶಯ ವ್ಯಕ್ತಪಡಿಸಿದರು.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ತಂದುಕೊಟ್ಟ ಉಡುಪಿ ವಿದ್ಯೋದಯ ಪ.ಪೂ. ಕಾಲೇಜ್​ ವಿದ್ಯಾರ್ಥಿನಿ, ಉಡುಪಿಯ ಸುಬ್ರಹ್ಮಣ್ಯ ನಗರದ ವೈಭವಿ ಆಚಾರ್ಯಳ ನಿವಾಸಕ್ಕೆ ಶನಿವಾರ ಭೇಟಿ ನೀಡಿ ಉಡುಪಿ ನಗರ ಬಿಜೆಪಿ ವತಿಯಿಂದ ಸನ್ಮಾನಿಸಿ, 10 ಸಾವಿರ ರೂ. ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.

ಪೊಡವಿಗೊಡೆಯ ಉಡುಪಿಯ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಅನುಗ್ರಹದಿಂದ ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ವೈಭವಿ ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ನಗರಸಭಾ ಸದಸ್ಯೆ ಜಯಂತಿ ಪೂಜಾರಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್​ ಅಮೀನ್​, ಪ್ರಧಾನ ಕಾರ್ಯದರ್ಶಿ ಜಗದೀಶ್​ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ವೈಭವಿಯ ಪಾಲಕರಾದ ಶಂಖಪಾಲ ಆಚಾರ್ಯ, ವಿದ್ಯಾ ಎಸ್​. ಆಚಾರ್ಯ, ಪಕ್ಷದ ಪ್ರಮುಖರಾದ ಉಮೇಶ್​ ಶೆಟ್ಟಿ, ಚಿನ್ಮಯ ಮೂರ್ತಿ, ಶ್ರೀನಿವಾಸ್​ ಹಾಗೂ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net