ಕ್ರೀಡೆಯಿಂದ ಆತ್ಮವಿಶ್ವಾಸ, ದೈಹಿಕ ಕ್ಷಮತೆ ಹೆಚ್ಚಳ

Hand Ball
Published on

ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಅನಿಸಿಕೆ

ಜಿಲ್ಲಾ ಮಟ್ಟದ ಹ್ಯಾಂಡ್​ ಬಾಲ್​ ಪಂದ್ಯಾಟ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಕ್ರೀಡೆಯಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ದೈಹಿಕ, ಮಾನಸಿಕ ಸದೃಢತೆ ಹೆಚ್ಚುತ್ತದೆ. ಅಲ್ಲದೆ, ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಸಮಯ ಪರಿಪಾಲನೆಯ ಜ್ಞಾನ ನೀಡುತ್ತದೆ. ಆತ್ಮವಿಶ್ವಾಸ ಬೆಳೆಸಿ ದೈಹಿಕ ಕ್ಷಮತೆಯನ್ನೂ ಹೆಚ್ಚಿಸುತ್ತದೆ ಎಂದು ಶಾಸಕ ಯಶ್​ಪಾಲ್​ ಸುವರ್ಣ ಅನಿಸಿಕೆ ವ್ಯಕ್ತಪಡಿಸಿದರು.

ಉಡುಪಿಯ ತೆಂಕನಿಡಿಯೂರುನಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಆಶ್ರಯದಲ್ಲಿ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಹ್ಯಾಂಡ್​ ಬಾಲ್​ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಶೋಭಾ ಡಿ. ನಾಯ್ಕ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ವಿಜಯಪ್ರಕಾಶ ಬಯಲಕೆರೆ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ಗಾಂವ್ಕರ್​, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಷನ್​ಕುಮಾರ್​ ಶೆಟ್ಟಿ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಜೀವನಕುಮಾರ್​ ಶೆಟ್ಟಿ, ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಮಂಜುನಾಥ ಜೋಗಿ ಉಪಸ್ಥಿತರಿದ್ದರು.

ಪ್ರಾಂಶುಪಾಲ ವಿಶ್ವನಾಥ ಕರಬ ಸ್ವಾಗತಿಸಿದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಶ್ರುತಿ ಬಿ.ಎಸ್​. ವಂದಿಸಿದರು.

ಪೂರ್ಣಪ್ರಜ್ಞ ಕಾಲೇಜು ಪ್ರಥಮ

ಸಭಾ ಕಾರ್ಯಕ್ರಮದ ಬಳಿಕ ನಡೆದ ಬಾಲಕರ ಮತ್ತು ಬಾಲಕಿಯರ ಹ್ಯಾಂಡ್​ ಬಾಲ್​ ಪಂದ್ಯಾಟದಲ್ಲಿ ಉಡುಪಿಯ ಪೂರ್ಣಪ್ರಜ್ಞ ಪ.ಪೂ. ಕಾಲೇಜು ಪ್ರಥಮ ಸ್ಥಾನ ಗಳಿಸಿತು. ಬಾಲಕರ ಹ್ಯಾಂಡ್​ ಬಾಲ್​ನಲ್ಲಿ ಅಜೆಕಾರಿನ ಜ್ಯೋತಿ ಪದವಿ ಪೂರ್ವ ಕಾಲೇಜು ದ್ವಿತೀಯ ಹಾಗೂ ಬಾಲಕಿಯರ ಹ್ಯಾಂಡ್​ ಬಾಲ್​ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಗಳಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net