

ವಿಜಯವಾಣಿ ಸುದ್ದಿಜಾಲ ಉಡುಪಿ
ಮಲ್ಪೆ ಮೀನುಗಾರ ಮಹಿಳೆಯರ ಸಹಕಾರಿ ಸಂಘವು ಸಹಕಾರ ತತ್ವದಡಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವುದರ ಜತೆಗೆ ವನ ಮಹೋತ್ಸವದಂತಹ ಪರಿಸರ ಸಂರಕ್ಷಣೆಯಲ್ಲೂ ತೊಡಗಿರುವುದು ಶ್ಲಾಘನೀಯ ಎಂದು ಶಾಸಕ ಯಶ್ಪಾಲ್ ಸುವರ್ಣ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಅಧ್ಯಕ್ಷೆ ಗೀತಾ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಜ್ಞಾನ ಜ್ಯೋತಿ ಭಜನಾ ಮಂದಿರದ ಪಾಂಡುರಂಗ ಮಲ್ಪೆ, ಸಂಘದ ಉಪಾಧ್ಯಕ್ಷೆ ರಾಧಾ ಸುವರ್ಣ, ನಿರ್ದೇಶಕಿಯರಾದ ಪೂರ್ಣಿಮಾ ಪುತ್ರನ್, ಯೋಗಿತಾ ಸುವರ್ಣ, ಕಾರ್ಯದರ್ಶಿ ಮಂಗಳಾ ತಿಲಕ್ ಹಾಗೂ ಮಹಿಳಾ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಜ್ಞಾನ ಜ್ಯೋತಿ ಭಜನಾ ಮಂದಿರದ ಸುವರ್ಣ ಮಹೋತ್ಸವದ ಆಚರಣೆಯನ್ನು ಸಹಕಾರಿ ಸಂಘಗಳ ಸಹಭಾಗಿತ್ವದಲ್ಲಿ ಆಯೋಜಿಸಿರುವುದು ಉತ್ತಮ ಕಾರ್ಯ. ಅದರಲ್ಲೂ ಗಿಡ ನೆಡುವ ಮೂಲಕ ಕಾರ್ಯಕ್ರಮ ನಡೆಸಿರುವುದು ಸಮಾಜಕ್ಕೆ ಮಾದರಿ ಹಾಗೂ ಉತ್ತಮ ಸಂದೇಶ ನೀಡಿದೆ. | ಯಶ್ಪಾಲ್ ಸುವರ್ಣ. ಉಡುಪಿ ಶಾಸಕ