

ವಿಜಯಪುರ: ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ನಗರದ ವಾರ್ಡ್ ನಂ.21 ರ ಇಬ್ರಾಹಿಂಪುರದ ನೀಲವ್ವ ಭಜಂತ್ರಿ, ಲಲಿತಾ ಮುತ್ತಗಿ ಹಾಗೂ ಶಶಿಕಾಂತ ಹೊಸಮನಿ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಪ್ರದೇಶದಲ್ಲಿ ಒಟ್ಟು 12 ಮನೆಗಳು ಬಿದ್ದಿವೆ. ಈಗಾಗಲೇ ಈ ಪ್ರದೇಶ ಸ್ಲಂ ಎಂದು ಘೋಷಣೆಯಾಗಿದ್ದು, ತಾವು ಪಾವತಿಸಬೇಕಾದ ವಂತಿಗೆ ಹಣದ ಪೈಕಿ ವೈಯಕ್ತಿಕವಾಗಿ ಪ್ರತಿಯೊಬ್ಬರಿಗೂ ತಲಾ ರೂ.10 ಸಾವಿರ ಪಾವತಿಸುವುದಾಗಿ ಭರವಸೆ ನೀಡಿದರು.
ವಾರ್ಡ್ ನಂ.32ರ ಜೋರಾಪುರಪೇಟ ರಾಘವೇಂದ್ರ ಮಠದ ಹತ್ತಿರ ಹಾಗೂ ಶಹಾಪೇಟಿ ಓಣಿಯಲ್ಲಿ ಚಿದಂಬರ ಜೋಶಿ, ಮಾರುತಿ ಶಂಕರ ಶಿಂಧೆ, ಸುಶೀಲಾಬಾಯಿ ಬಸಪ್ಪ ಶಾಪೇಟಿ ಅವರ ಮನೆಗಳಿಗೆ ಹಾಗೂ ಭಜಂತ್ರಿ ಗಲ್ಲಿಯ ಮೋಸೋಬಾ ದೇವಸ್ಥಾನಕ್ಕೆ, ಭೇಟಿ ನೀಡಿದರು.
ಬಳಿಕ ವಾರ್ಡ್ ನಂ.31ರ ಅಡಕಿ ಗಲ್ಲಿಯಲ್ಲಿ ಶೇಖರ ಬಾಗೇವಾಡಿ ಅವರ ಮನೆಗೆ ಭೇಟಿ ನೀಡಿ, ವೈಯಕ್ತಿವಾಗಿ ರೂ.10 ಸಾವಿರ ಸಹಾಯ ಧನ ನೀಡಿದರು. ವಾರ್ಡ್ ನಂ.3ರ ಗ್ಯಾಂಗ್‌ಬಾವಡಿ, ಕಕ್ಕಯ್ಯ ಕಾಲನಿಯಲ್ಲಿ ರಾಜಶೇಖರ ಭಜಂತ್ರಿ ಅವರ ಮನೆಗೆ ಭೇಟಿ ನೀಡಿದರು. ವಾರ್ಡ್ ನಂ.14ರ ಸುಣಗಾರ ಗಲ್ಲಿಗೆ ಭೇಟಿ ನೀಡಿ ಅಲ್ಲಿನ ಚರಂಡಿಗಳನ್ನು ದುರಸ್ತಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಸದಸ್ಯರಾದ ಮಲ್ಲಿಕಾರ್ಜುನ ಗಡಗಿ, ಶಿವರುದ್ರ ಬಾಗಲಕೋಟ, ಜವಾಹರ ಗೋಸಾವಿ, ಪ್ರೇಮಾನಂದ ಬಿರಾದಾರ, ರಾಜಶೇಖರ ಕುರಿಯವರ, ಮಳುಗೌಡ ಪಾಟೀಲ, ಕಿರಣ ಪಾಟೀಲ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಮುಖಂಡರಾದ ಪಾಂಡುಸಾಹುಕಾರ ದೊಡಮನಿ, ಮಹೇಶ ಒಡೆಯರ, ಮಲ್ಲಮ್ಮ ಜೋಗೂರ, ಸಂತೋಷ ತಳಕೇರಿ, ಮಡಿವಾಳ ಯಾಳವಾರ, ರಾಜಶೇಖರ ಭಜಂತ್ರಿ, ಪ್ರವೀಣ ನಾಟೀಕಾರ, ಶರಣು ಕಾಖಂಡಕಿ, ಪಾಪುಸಿಂಗ್ ರಜಪೂತ, ವಿಕ್ರಮ ಗಾಯಕವಾಡ, ಚಂದ್ರು ಚೌಧರಿ, ಮಲ್ಲಿಕಾರ್ಜನ ಗುಂದಗಿ, ರಾಮು ಭಜಂತ್ರಿ, ಭೀಮು ಮಾಶ್ಯಾಳ, ಸಂತೋಷ ಮುಂಜಾನೆ, ಮಹೇಶ ಹೆರಲಗಿ ಮತ್ತಿತರರಿದ್ದರು.