

ಮೈಸೂರು: ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂದು ಸಚಿವರು, ಶಾಸಕರು ಅಪೇಕ್ಷೆ ಪಟ್ಟಿದ್ದಾರೆ. ಉತ್ತಮ ಆಡಳಿತ, ನಾಯಕತ್ವಕ್ಕಾಗಿ ಸಿದ್ದರಾಮಯ್ಯ ಅನಿವಾರ್ಯ ಎಂಬ ಅಭಿಪ್ರಯವನ್ನು ಕೆಲವು ನಾಯಕರು ವ್ಯಕ್ತಪಡಿಸಿರುವುದರಲ್ಲಿ ತಪ್ಪೇನಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಸಿದ್ದರಾಮಂ್ಯು ಅನಿವಾಂರ್ು ಎಂಬ ವಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆಯನ್ನು ಯತೀಂದ್ರ ಸಿದ್ದರಾಮಯ್ಯ ಸಮರ್ಥಿಸಿಕೊಂಡರು. ರಾಜ್ಯಕ್ಕೆ ಸಿದ್ದರಾಮಂ್ಯು ಸಿಎಂ ಆಗಿರುವುದು ಅನಿವಾಂರ್ು. ಬಹುತೇಕ ಕಾಂಗ್ರೆಸ್ ಪಕ್ಷದ ಶಾಸಕರ ಅಭಿಪ್ರಾಂುವೂ ಇದೇ ಆಗಿದೆ. ಶಾಸಕರು, ಸಚಿವರು ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಂ್ಯು ಅಧಿಕಾರದಲ್ಲಿ ಮುಂದುವರಿಯಬೇಕು ಎಂಬ ಅಭಿಪ್ರಾಯ ಹೊಂದಿದ್ದಾರೆ ಎಂದರು.
ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆ ಆಗಿಲ್ಲ. ಪಕ್ಷದಲ್ಲಿ ಈ ಕುರಿತು ಂಾವುದೇ ಚರ್ಚೆ ನಡೆಸಿಲ್ಲ. ಬದಲಾವಣೆ ವಿಚಾರ ನನಗಾಗಲಿ, ತಂದೆಂುವರಿಗಾಗಲಿ ಗೊತ್ತೇ ಇಲ್ಲ. ಂಾರೇ ಸಿಎಂ ಆಗಬೇಕಾದರೂ ಹೈಕವಾಂಡ್ ಒಪ್ಪಿಗೆ ಬೇಕು. ಸಿದ್ದರಾಮಂ್ಯು ಮುಂದುವರಿಂುಬೇಕಾದರೂ ಕೂಡ ಒಪ್ಪಿಗೆ ಅನಿವಾಂರ್ು. ಇದೇ ವಾತನ್ನು ತಂದೆಂುವರು ಹೇಳಿರುವುದು ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಕೆ.ಎಚ್.ಮುನಿಂುಪ್ಪ ಸಿಎಂ ಆಗುವ ವಿಚಾರ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಮಂದಿ ಆಕಾಂಕ್ಷಿ ಗಳಿದ್ದಾರೆ. ಅವರೆಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ. ಅದನ್ನು ನಾವು ತಪ್ಪು ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.