ಆರೋಗ್ಯ ಉಪಕೇಂದ್ರಕ್ಕೆ ಶಾಸಕರ ಒತ್ತಾಯ

ವಕ್ಕಲೇರಿ ಗ್ರಾಮದಲ್ಲಿನ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ, ಮೈಲಾಂಡಹಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಉಪಕೇಂದ್ರ ಪ್ರಾರಂಭಿಸಲು ಸಚಿವ ದಿನೇಶ್​ ಗುಂಡೂರಾವ್​ಗೆ ಶಾಸಕ ಕೊತ್ತೂರು ಮಂಜುನಾಥ್​ ಮನವಿ ಸಲ್ಲಿಸಿದರು. ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಪಿಎಲ್ಡಿ ಬ್ಯಾಂಕ್​ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್​ ಇದ್ದರು.
21 KLR 04
ವಕ್ಕಲೇರಿ ಗ್ರಾಮದಲ್ಲಿನ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ, ಮೈಲಾಂಡಹಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಉಪಕೇಂದ್ರ ಪ್ರಾರಂಭಿಸಲು ಸಚಿವ ದಿನೇಶ್​ ಗುಂಡೂರಾವ್​ಗೆ ಶಾಸಕ ಕೊತ್ತೂರು ಮಂಜುನಾಥ್​ ಮನವಿ ಸಲ್ಲಿಸಿದರು. ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಪಿಎಲ್ಡಿ ಬ್ಯಾಂಕ್​ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್​ ಇದ್ದರು.
Published on

ಸಚಿವ ದಿನೇಶ್​ ಗುಂಡೂರಾವ್​ಗೆ ಶಾಸಕ ಕೊತ್ತೂರು ಮಂಜುನಾಥ್​ ಮನವಿ



ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿ ಕೇಂದ್ರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿ, ಮೈಲಾಂಡಹಳ್ಳಿಯಲ್ಲಿ ಆರೋಗ್ಯ ಉಪಕೇಂದ್ರ ಮಂಜೂರು ಮಾಡುವಂತೆ ಶಾಸಕ ಕೊತ್ತೂರು ಮಂಜುನಾಥ್​ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಅವರಿಗೆ ಮನವಿ ಸಲ್ಲಿಸಿದರು.
ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬುಧವಾರ ವಿವಿಧ ಕಾರ್ಯಕ್ರಮಗಳಿಗೆ ಸಚಿವರು ಆಗಮಿಸಿದ ಸಂದರ್ಭದಲ್ಲಿ ಮನವಿ ಮಾಡಿದ ಶಾಸಕರು, ವಕ್ಕಲೇರಿ ಹೋಬಳಿ ಕೇಂದ್ರವಾಗಿದ್ದು, ಸುಮಾರು 40 ಗ್ರಾಮಗಳಿಗೆ ಮುಖ್ಯ ಸಂಪರ್ಕ ಕೊಂಡಿಯಾಗಿದೆ. ಸದರಿ ಗ್ರಾಮದಲ್ಲಿ ವಿದ್ಯುತ್​ ಸಬ್​ ಸ್ಟೇಷನ್​, ನಾಡಕಚೇರಿ, ಬ್ಯಾಂಕ್​ ಹಾಗೂ 10ಕ್ಕಿಂತಲೂ ಹೆಚ್ಚು ಶಾಲೆಗಳು ಸೇರಿ ಮತ್ತು ನವೋದಯ ಕೇಂದ್ರೀಯ ಶಾಲೆ ಇದ್ದು, ಗ್ರಾಮದಲ್ಲಿ ಸರಿಸುಮಾರು 6 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವು ಇದ್ದು, ತುರ್ತು
ಚಿಕಿತ್ಸೆಗಾಗಿ ಕೋಲಾರಕ್ಕೆ ಹೋಗಬೇಕಾದ ಪರಸ್ಥಿತಿ ಇದೆ ಎಂದು ಮನವಿ ಮಾಡಿದರು.
ಮೈಲಾಂಡಹಳ್ಳಿ ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತುಂಬಾ ದೂರವಿದೆ. ಗ್ರಾಮದಲ್ಲಿ 1,200 ಜನಸಂಖ್ಯೆ ಇದ್ದು, ಅದರಲ್ಲಿ ಹಿರಿಯ ನಾಗರಿಕರಿಗೆ, ಗರ್ಭಿಣಿಯರಿಗೆ, ಅಂಗವಿಕಲರಿಗೆ ಹಾಗೂ ಮಕ್ಕಳಿಗೆ ಆರೋಗ್ಯದ ದೃಷ್ಟಿಯಿಂದ ಬಹಳ ಅನನುಕೂಲವಾಗುತ್ತಿದ್ದು, ಮೈಲಾಂಡಹಳ್ಳಿಯಲ್ಲಿ ಆರೋಗ್ಯ ಉಪಕೇಂದ್ರ ನಿಮಾರ್ಣ ಮಾಡುವುದರಿಂದ ಸುತ್ತಮುತ್ತಲಿನ ಗ್ರಾಮಗಳಾದ ತಿರುಮಲಕೊಪ್ಪ, ಗಂಗಾಪುರ, ಲಕ್ಷ್ಮೀಪುರ, ಮಲ್ಲೇಶ್ವರನಗರ, ಕೂತಾಂಡಹಳ್ಳಿ ಮುಂತಾದ ಗ್ರಾಮಗಳ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net