ಶಾಸಕರಿಂದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ

2adarshkdag3
Published on

ಮಡಿಕೇರಿ: ಜಿಲ್ಲಾಡಳಿತ, ನಗರಸಭೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ನಗರದ ಗಾಂಧಿ ಮಂಟಪದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಶಾಸಕ ಡಾ.ಮಂತರ್ ಗೌಡ ಮಾರ್ಲಾಪಣೆ ಮಾಡಿದರು.


ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸತೀಶ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್, ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ.ಮ್ಯಾಥ್ಯು, ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಕಾರ್ಯದರ್ಶಿ ಇತರರು ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು.


ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಗಾಂಧಿ ಮಂಟಪದಲ್ಲಿ ಮಹಾತ್ಮ ಗಾಂಧೀಜಿರವರ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net