

ಮಂಡ್ಯ: ಅನಾರೋಗ್ಯದಿಂದಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆದಿಚುಂಚನಗಿರಿ ಕೊಮ್ಮೇರಹಳ್ಳಿ ಶಾಖಾ ಮಠದ ಮುಖ್ಯಸ್ಥ ಪುರುಷೋತ್ತಮಾನಂದನಾಥ ಸ್ವಾಮೀಜಿ ಅವರನ್ನು ಶಾಸಕರು ಭೇಟಿ ಮಾಡಿದರು.
ಬಿಜಿಎಸ್ ಆಸ್ಪತ್ರೆಗೆ ತೆರಳಿದ ಶಾಸಕ ರವಿಕುಮಾರ್ ಗಣಿಗ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಪುರುಷೋತ್ತಮಾನಂದನಾಥ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದರು. ಅಂತೆಯೇ ಹಲವು ಹೊತ್ತು ಸ್ವಾಮೀಜಿ ಅವರೊಂದಿಗೆ ಕಾಲ ಕಳೆದರು. ಚಿಕಿತ್ಸೆ ನಂತರ ಸ್ವಾಮೀಜಿ ಅವರ ಆರೋಗ್ಯ ಚೇತರಿಸಿಕೊಂಡಿದ್ದು, ಆ.26ರಂದು ಕೊಮ್ಮೇರಹಳ್ಳಿಗೆ ಬರಲಿದ್ದಾರೆ.