ಸಿಸಿ ರಸ್ತೆ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

HUN-AUG-17-1(GUDDALI POOJE)
ಹುಣಸೂರು ನಗರದ 26ನೇವಾರ್ಡ್ ನಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜಿ.ಡಿ.ಹರೀಶ್‌ಗೌಡ ಭೂಮಿಪೂಜೆ ನೆರವೇರಿಸಿದರು. ಗಣೇಶ್ ಕುಮಾರಸ್ವಾಮಿ, ಆಶಾ ಕೃಷ್ಣನಾಯಕ, ಕೃಷ್ಣರಾಜ ಗುಪ್ತ, ದೇವರಾಜ್, ಸಿರಾಜ್ ಇದ್ದರು.
Published on

ಹುಣಸೂರು: ನಗರದ 26ನೇ ವಾರ್ಡ್‌ನಲ್ಲಿ ಭಾನುವಾರ ನಗರಸಭೆ ನಿಧಿಯಡಿ 40 ಲಕ್ಷ ರೂ.ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಜಿ.ಡಿ.ಹರೀಶ್‌ಗೌಡ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿ, ಹುಣಸೂರು ನಗರದಾದ್ಯಂತ ಮುಖ್ಯರಸ್ತೆಗಳು ಸಂಪೂರ್ಣವಾಗಿ ದುಸ್ಥಿತಿ ತಲುಪಿದ್ದು, ಶಾಸಕರ ನಿಧಿಯಿಂದ ಒಟ್ಟು 4.5 ಕೋಟಿ ರೂ.ಗಳ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ನಿರ್ಧರಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಹಾದುಹೋಗುವ ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದ್ದೇನೆ. ಸರ್ಕಾರದ ಅನುದಾನಗಳಲ್ಲಿ ತೀವ್ರ ಕೊರತೆ ಉಂಟಾಗಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ತೊಂದರೆಯಾಗುತ್ತಿದೆ. ಈ ಎಲ್ಲದರ ನಡುವೆ ಸಚಿವರೊಂದಿಗೆ ಸತತ ಸಂಪರ್ಕ ಸಾಧಿಸಿ ಅನುದಾನ ತರುವಲ್ಲಿ ಯಶಸ್ವಿಯಾಗುತ್ತಿದ್ದೇನೆ. ಇತ್ತೀಚೆಗೆ ಹುಣಸೂರು ತಾಲೂಕು ವ್ಯಾಪ್ತಿಯ ಮರೂರು ನಾಲೆ ಮತ್ತಿತರ ನಾಲೆಗಳ ಸಮಗ್ರ ಅಬಿವೃದ್ಧಿಗಾಗಿ 139 ಕೋಟಿ ರೂ. ಅನುದಾನ ಮಂಜೂರಾಗಿರುವುದು ನನಗೆ ಸಮಾಧಾನ ತಂದಿದೆ ಎಂದರು.

ನಗರಸಭಾಧ್ಯಕ್ಷ ಗಣೇಶ್ ಕುಮಾರಸ್ವಾಮಿ ಮಾತನಾಡಿ, ನಗರಸಭಾ ಸದಸ್ಯನಾಗಿ ಪ್ರಸ್ತುತ 2020ರಿಂದ 25ರ ಅವಧಿಯಲ್ಲಿ ನನ್ನ ವಾರ್ಡ್ ವ್ಯಾಪ್ತಿಯಲ್ಲಿ ಒಟ್ಟು 4 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ರಸ್ತೆ, ಚರಂಡಿ ಮತ್ತಿತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದೇನೆ. ಈ ಎಲ್ಲ ಕಾಮಗಾರಿಗಳಿಗೆ ನನ್ನ ವಾರ್ಡ್ ಜನರ ಸಹಕಾರ ದೊರಕಿರುವುದು ನನ್ನ ಸೌಭಾಗ್ಯ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಆಶಾ ಕೃಷ್ಣನಾಯಕ, ನಿಕಟಪೂರ್ವ ಅಧ್ಯಕ್ಷ ಎಸ್.ಶರವಣ, ಸದಸ್ಯರಾದ ಕೃಷ್ಣರಾಜ ಗುಪ್ತ, ದೇವರಾಜ್, ಸತೀಶ್ ಕುಮಾರ್, ಪೌರಾಯುಕ್ತೆ ಕೆ.ಮಾನಸಾ, ಎಇಇ ಶರ್ಮಿಳಾ, ಎಇ ಲೋಕೇಶ್ ಮತ್ತು ವಾರ್ಡ್ ನಿವಾಸಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net