

ರೋಣ: ಪಟ್ಟಣದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಜು.23ರಂದು ರೋಣ ಶಾಸಕ ಜಿ.ಎಸ್. ಪಾಟೀಲ ಮತ್ತು ಅಥಣಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಗಾಣಿಗ ಸಮಾಜದ ವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ದಶರಥ ಗಾಣಿಗೇರ ತಿಳಿಸಿದರು.
ಪಟ್ಟಣದಲ್ಲಿ ಶುಕ್ರವಾರ ಗಾಣಿಗ ಸಮಾಜದ ಮುಖಂಡರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಅವರು, ಕಾರ್ಯಕ್ರಮದ ಸಾನ್ನಿಧ್ಯವನ್ನು ಜಯಬಸವ ಕುಮಾರ ಮಹಾಸ್ವಾಮೀಜಿ ವಹಿಸುವರು. ನೀಲಮ್ಮ ತಾಯಿ ಅಸುಂಡಿ ಸಮ್ಮುಖ ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಬಸವರಾಜ ನವಲಗುಂದ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಮುದಾಯದ ಜನಪ್ರತಿನಿಧಿಗಳು, ಸದಸ್ಯರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಪರಶುರಾಮ ಅಳಗವಾಡಿ, ಬಸವರಾಜ ನವಲಗುಂದ ಮಾತನಾಡಿ, ಗಾಣಿಗ ಸಮಾಜದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು ಎಂದರು. ಬಸವರಾಜ ಸುಂಕದ, ಬಸನಗೌಡ ಕರಿಗೌಡ್ರ, ಸಿದ್ದಣ್ಣ ನವಲಗುಂದ, ನಿಂಗಪ್ಪ ನವಲಗುಂದ, ಇತರರಿದ್ದರು.