ಜಿಲ್ಲೆಯ ಅಭಿವೃದ್ಧಿಗೆ ಜನರ ಮುನ್ನುಡಿ: ಎಂಎಲ್‌ಸಿ ದಿನೇಶ್ ಗೂಳಿಗೌಡ ಅಭಿಮತ

Mlc Dinesh Gooligowda
Published on

ಮಂಡ್ಯ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಿಲ್ಲೆಯಲ್ಲಿ ಅಭೂತ ಪೂರ್ವ ಗೆಲುವನ್ನು ಸಾಧಿಸಿದೆ. ಈ ಮೂಲಕ ಸಮಗ್ರ ಅಭಿವೃದ್ಧಿಗೆ ಜಿಲ್ಲೆಯ ಜನರು ಮುನ್ನಡಿ ಬರೆದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಹೇಳಿದ್ದಾರೆ.

ನಾಗಮಂಗಲ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣ, ಮಂಡ್ಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವನ್ನು ಕಂಡಿರುವುದಲ್ಲದೇ, ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರು ಸಹ ಗೆಲುವನ್ನು ಸಾಧಿಸಿದ್ದಾರೆ. ಈ ಮೂಲಕ ಜಿಲ್ಲೆಯ ಜನತೆ ಪಕ್ಷದ ಮೇಲೆ ವಿಶ್ವಾಸವಿಟ್ಟಿದ್ದಾರೆ. ಇದು ನಿಜವಾಗಿಯೂ ಮತದಾರರ ಗೆಲುವಾಗಿದೆ ಎಂದಿದ್ದಾರೆ.

ಗೆಲುವಿಗೆ ಕಾರಣರಾದ ಮಂಡ್ಯದ ಜನತೆಗೆ ಧನ್ಯವಾದಗಳನ್ನು ಅರ್ಪಿಸುವುದರ ಜತೆಗೆ ಮೊದಲೇ ಪಕ್ಷ ನುಡಿದಂತೆ 200 ಯುನಿಟ್ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗಿ ಪದವಿದರರಿಗೆ 3 ಸಾವಿರ ರೂಪಾಯಿ ಭತ್ಯೆ ಸೇರಿದಂತೆ ಎಲ್ಲ ಘೋಷಣೆಗಳನ್ನು ಆದಷ್ಟು ಶೀಘ್ರದಲ್ಲೇ ನಮ್ಮ ಸರ್ಕಾರ ಜಾರಿ ಮಾಡುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net