

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ದ.ಕ. ದ್ವಿಸದಸ್ಯ ವಿಧಾನ ಪರಿಷತ್ ಕ್ಷೇತ್ರಕ್ಕೆ ಉಭಯ ಜಿಲ್ಲೆಗಳ 389 ಮತಗಟ್ಟೆಗಳಲ್ಲಿ ಬಿರುಸಿನ ಮತದಾನ ಆರಂಭಗೊಂಡಿದೆ.
ಸಂಸದರು, ಶಾಸಕರು, ಮನಪಾ,ಪುರಸಭೆ, ನಗರ ಸಭೆ, ಗ್ರಾಮ ಪಂಚಾಯತಿ ಸದಸ್ಯರು ತಮ್ಮ ಮತಗಟ್ಟೆಗಳಲ್ಲಿ ಬೆಳಗ್ಗೆಯೇ ಮತದಾನಕ್ಕೆ ಆಗಮಿಸಿದ್ದಾರೆ. ಮನಪಾ ವ್ಯಾಪ್ತಿಯಲ್ಲಿ ಕೆಲವು ಮತಗಟ್ಟೆಗಳಲ್ಲಿ ಬೆಳಗ್ಗೆ ಸರತಿ ಸಾಲು ಕಂಡು ಬಂತು.
ಮತದಾನ ಮುಕ್ತ, ಪಾರದರ್ಶಕ ಹಾಗು ನ್ಯಾಯ ಸಮ್ಮತವಾಗಿ ನಡೆಯಲು ಜಿಲ್ಲಾಡಳಿತದಿಂದ ಎಲ್ಲ ಪೂರಕ ವ್ಯವಸ್ಥೆ ಕೈಗೊಳ್ಳಲಾಗಿದೆ. ಸಂಜೆ 4 ಗಂಟೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.