ವಿಧಾನ ಪರಿಷತ್ ಎಲೆಕ್ಷನ್ : ಚುನಾವಣಾ ವೀಕ್ಷಕರ ನೇಮಕ

VVPAT-Election-voting-2-scaled
Published on

ಮೈಸೂರು: ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆ ಸಂಬಂಧ ಭಾರತ ಚುನಾವಣಾ ಆಯೋಗವು ಹಿರಿಯ ಐ.ಎ.ಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನು ನೇಮಕ ಮಾಡಿದೆ.


ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಟಿ.ಕೆ.ಅನಿಲ್ ಕುಮಾರ್ ಹಾಗೂ ಹರ್ಷ ಗುಪ್ತ ಅವರನ್ನು ಚುನಾವಣಾ ವೀಕ್ಷಕರಾಗಿ ನೇಮಿಸಲಾಗಿದ್ದು,

ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರುದ್ರೇಶ್(9964174107), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್(9448244340) ಸಹಾಯಕ ಅಧಿಕಾರಿಗಳಾಗಿರುತ್ತಾರೆ.


ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗೆ ಡಾ.ರವಿಶಂಕರ್ ಅವರನ್ನು ಚುನಾವಣಾ ವೀಕ್ಷಕರಾಗಿ ನೇಮಿಸಲಾಗಿದ್ದು, ಮೈಸೂರಿನ ಅಬಕಾರಿ ಉಪ ಆಯುಕ್ತ ಎಸ್.ನಾಗರಾಜಪ್ಪ(9449597178) ಸಹಾಯಕ ಅಧಿಕಾರಿಗಳಾಗಿರುತ್ತಾರೆ.


ಮೂರು ಕ್ಷೇತ್ರಗಳ ಚುನಾವಣಾ ವೀಕ್ಷಕರು ಈಗಾಗಲೇ ಚುನಾವಣಾ ಕೆಲಸ-ಕಾರ್ಯಗಳ ವೀಕ್ಷಣೆ ನಡೆಸುತ್ತಿದ್ದು, ವೀಕ್ಷಕರನ್ನು ಭೇಟಿ ಮಾಡಲು ಅಥವಾ ಸಂಪರ್ಕಿಸಲು ದೂ. 7204294565 ಗೆ ಕರೆಮಾಡಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net