

ಕೊಪ್ಪಳ: ನಾನು ವಿಪ ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ. ಕಳೆದ ಬಾರಿ ಕಡಿಮೆ ಮತಗಳ ಅಂತರದಿಂದ ಸೋತಿದ್ದು, ಈ ಬಾರಿ ಗೆಲ್ಲುವ ವಿಶ್ವಾಸವಿದೆ ಎಂದು ಕೆಪಿಸಿಸಿ ಪದವೀಧರ ವಿಭಾದ ಕಾರ್ಯದರ್ಶಿ ಕೆ.ಬಿ.ಶ್ರೀನಿವಾಸ ರೆಡ್ಡಿ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ನಾನು ಅಖಿಲ ಭಾರತ ವೀರಶೈವ ಮಹಾಸಭಾ ಕಕ ಭಾಗದ ಉಸ್ತುವಾರಿ. ವೀರಶೈವ ವಿದ್ಯಾವರ್ಧಕ ಸಂಸ್ಥೆಯಲ್ಲೂ ಆಜೀವ ಸದಸ್ಯನಿದ್ದೇನೆ. ಇಷ್ಟು ವರ್ಷ ಬಿಜೆಪಿ ಪಕ್ಷದಲ್ಲಿದ್ದೆ. ಕೆಲ ತಿಂಗಳ ಹಿಂದೆ ಕಾಂಗ್ರೆಸ್ ಸೇರಿರುವೆ.
2018ರಲ್ಲಿ ನಡೆದ ವಿಪ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸಿ 150 ಮತಗಳ ಅಂತರದಲ್ಲಿ ಪರಾಭವಗೊಂಡಿರುವೆ. ಈ ಬಾರಿ ನನಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಲ್ಲಿ ಖಂಡಿತ ಗೆಲ್ಲುವೆ.
ಈ ಬಗ್ಗೆ ಈಗಾಗಲೇ ಸಚಿವ ಈಶ್ವರ ಖಂಡ್ರೆ, ಶಾಸಕ ಶಾಮನೂರು ಶಿವಶಂಕರಪ್ಪ ಸೇರಿ ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ಜನಪ್ರತಿನಿಧಿಗಳು ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿರುವೆ.
ಏಳೆಂಟು ಆಕಾಂಕ್ಷಿಗಳಿದ್ದಾರೆ. ಅಂತಿಮವಾಗಿ ಯಾರಿಗೆ ಟಿಕೆಟ್ ಸಿಕ್ಕರೂ ಅವರ ಗೆಲುವಿಗೆ ಶ್ರಮಿಸುವೆ ಎಂದರು. ಕಲ್ಯಾಣ ಕರ್ನಾಟಕದ ಪದವೀಧರ ಕ್ಷೇತ್ರದ ಕೆಪಿಸಿಸಿ ಕಾರ್ಯದರ್ಶಿ ವೀರಾಂಜನೇಯ,
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಷಾ ಪಲ್ಟನ್, ಜಿಪಂ ಮಾಜಿ ಸದಸ್ಯ ಪ್ರಸನ್ನ ಗಡಾದ, ಮುಖಂಡ ಶಿವರಡ್ಡಿ ಭೂಮಕ್ಕನವರ, ಶಿವಕುಮಾರ ಶೆಟ್ಟರ್ ಇತರರಿದ್ದರು.