

ಮಂಡ್ಯ: ಸಮಾಜ ಸೇವಾ ಕ್ಷೇತ್ರದಲ್ಲಿ ವಿವೇಕಾನಂದ ಅವರು ತೊಡಗಿಕೊಂಡು ಸೇವೆಯನ್ನು ಮುಂದುವರಿಸಿದ್ದಾರೆ. ಅವರನ್ನು ಗೆಲ್ಲಿಸಿಕೊಂಡು ಬಂದರೆ ಶಿಕ್ಷಕರ ಸಮಸ್ಯೆ ಬಗೆಹರಿಯಲಿದೆ. ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವ ಭರವಸೆಯನ್ನು ಶಿಕ್ಷಕರು ಮತ್ತು ಪ್ರಾಧ್ಯಾಪಕರು ನೀಡಿರುವುದರಿಂದ ನಮಗೆ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ ಡಾ.ಕೆ.ಅನ್ನದಾನಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಅವರ ಪರವಾಗಿ ಮತಯಾಚನೆ ಮಾಡಿದ ಅವರು, ಮೊದಲ ಪ್ರಾಶಸ್ತ್ಯದ ಮತವನ್ನು ನಮ್ಮ ಎನ್‌ಡಿಎ ಅಭ್ಯರ್ಥಿಗೆ ನೀಡಬೇಕು. ಈ ಬಾರಿ ಶಿಕ್ಷಕರು ಬದಲಾವಣೆ ಬಯಸಿದ್ದಾರೆ ಎಂದರು.
ಎನ್‌ಡಿಎ ಅಭ್ಯರ್ಥಿ ಕೆ.ವಿವೇಕಾನಂದ ಮಾತನಾಡಿ, ಜಿಲ್ಲೆಯಲ್ಲಿ ಹೋದಲ್ಲೆಲ್ಲಾ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಅವರ ಸೇವೆಗೆ ಸಿದ್ಧನಾಗಿರುವ ನನಗೆ ಆಶೀರ್ವಾದ ಮಾಡಬೇಕು. ಮಳವಳ್ಳಿ, ಮದ್ದೂರು, ಕೆ.ಆರ್.ಪೇಟೆ, ಪಾಂಡವಪುರ ಸೇರಿದಂತೆ ಶಿಕ್ಷಕರನ್ನು ಭೇಟಿ ಮಾಡಿ ಮತಯಾಚನೆ ಮಾಡುತ್ತಿದ್ದೇನೆ. ಮತದಾರರು ತೋರಿಸುತ್ತಿರುವ ಪ್ರೀತಿಗೆ ನಾನು ಅಭಾರಿಯಾಗಿದ್ದೇನೆ. ಅದೇ ರೀತಿ ಚುನಾವಣೆಯಲ್ಲಿ ಬೆಂಬಲಿಸಬೇಕೆಂದು ಮನವಿ ಮಾಡಿದರು.
ಜೆಡಿಎಸ್ ಮುಖಂಡರಾದ ಕೆ.ಎಲ್.ರಮೇಶ್, ಚಂದ್ರಪ್ಪ ಕಚ್ಚೀಗೆರೆ ಇತರರಿದ್ದರು.