ಅಮರನಾಥ ಪಾಟೀಲ್ ಗೆ ಬಿಜೆಪಿ ಟಿಕೆಟ್.

Amarnath patil
Published on

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ್ ಮುಂಬರುವ ದಿನಗಳಲ್ಲಿ ಜೂನ್ -೩ರಂದು ಡೆಯಲಿರುವ ಈಶಾನ್ಯ ಪದವಿಧರ ಮತಕ್ಷೇತ್ರದ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಶನಿವಾರ ಪಕ್ಷವು ಘೋಷಣೆ ಮಾಡಿದೆ.

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಗೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಗುರುವಾರ ಕ್ಷೇತ್ರದ ಚುನಾವಣಾಧಿಕಾರಿಗಳೂ ಆದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ಈಗಾಗಲೇ ಚುನಾವಣಾ ಅಧಿಸೂಚನೆ ಪ್ರಕಟಿಸಿದ್ದಾರೆ.

ಅಧಿಸೂಚನೆ ಪ್ರಕಟ ದಿನಾಂಕದಿಂದ ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿರುತ್ತದೆ. ನಾಮಪತ್ರಗಳ ಪರಿಶೀಲನೆ ಕಾರ್ಯ ಮೇ 17ರಂದು ನಡೆಯಲಿದ್ದು, ಮೇ 20ಕ್ಕೆ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಜೂನ್ 6ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net