

ಮೈಸೂರು: ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರನ್ನು ಶಿಕ್ಷಕರು ಗೆಲ್ಲಿಸಬೇಕು ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮನವಿ ಮಾಡಿದರು.
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸಿದೆ. ಮರಿತಿಬ್ಬೇಗೌಡ ಅವರು ವಿಧಾನ ಪರಿಷತ್ ಸದಸ್ಯರಾಗಿ ಈ ಕ್ಷೇತ್ರದಲ್ಲಿ ಹಲವಾರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಅವರು ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸಿ ಕಾರ್ಯನಿರ್ವಹಿಸಿದ್ದಾರೆ. ಹಾಗಾಗಿ ಅವರನ್ನು ಮರು ಆಯ್ಕೆ ಮಾಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಕೋರಿಕೊಂಡರು.
ಹಳೆಯ ಪಿಂಚಣಿ ಯೋಜನೆ ಜಾರಿ, ಅತಿಥಿ ಶಿಕ್ಷಕರ ಸಮಸ್ಯೆಗಳ ನಿವಾರಣೆ, 7ನೇ ವೇತನ ಆಯೋಗ ಜಾರಿಗೊಳಿಸಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರಗಳು ಶಿಕ್ಷಕರ ಸಮಸ್ಯೆಗಳನ್ನು ಬಗೆ ಹರಿಸಲು ಸಂಪೂರ್ಣ ನಿರ್ಲಕ್ಷೃ ವಹಿಸಿವೆ. ಬಿಜೆಪಿ ಹಾಗೂ ಜೆಡಿಎಸ್‌ನಿಂದ ಶಿಕ್ಷಕರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಪ್ರೊ.ಶಂಕರೇಗೌಡ, ಪ್ರೊ.ನಾಗರಾಜ್, ಪ್ರೊ.ದೇವರಾಜ್ ಇದ್ದರು.