ಪರಿಷತ್ ಚುನಾವಣೆ ಯಶಸ್ವಿಗೊಳಿಸಿ: ವೀಕ್ಷಕ ಡಾ.ಜೆ.ರವಿಶಂಕರ್ ಸೂಚನೆ

MLC election observer Dr. J. Ravishankar meeting Mandya
Published on

ಮಂಡ್ಯ: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯು ಜೂ.3ರಂದು ನಡೆಯಲಿದ್ದು, ಚುನಾವಣಾ ಕಾರ್ಯವನ್ನು ಯಶಸ್ವಿಗೊಳಿಸಿ ಎಂದು ಅಬಕಾರಿ ಆಯುಕ್ತರೂ ಆದ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ವೀಕ್ಷಕ ಡಾ.ಜೆ.ರವಿಶಂಕರ್ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಅಧ್ಯಕ್ಷಾಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಆಯೋಜಿಸಿದ್ದ ಚುನಾವಣಾ ತರಬೇತಿಯಲ್ಲಿ ಮಾತನಾಡಿದರು. ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆಗೆ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಅಧ್ಯಕ್ಷಾಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಇವರಿಗೆ ಚುನಾವಣೆ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಅನುಭವ ಇರುವುದರಿಂದ ಬಹಳ ಅನುಕೂಲಕರ ಹಾಗೂ ಸುಲಭವಾಗಿ ಚುನಾವಣಾ ಕಾರ್ಯವನ್ನು ನಿರ್ವಹಿಸಬಹುದು ಎಂದು ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಚುನಾವಣಾ ಅಧ್ಯಕ್ಷಾಧಿಕಾರಿ, ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಚುನಾವಣೆಯ ಮಾರ್ಗಸೂಚಿಯನ್ನು ತಿಳಿದುಕೊಂಡು ಅದರಂತೆಯೇ ಕಾರ್ಯ ನಿರ್ವಹಿಸಿ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್  ಆಸಿಫ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್. ನಾಗರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net