ಅಹವಾಲು ಆಲಿಸಿದ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ

IMG-20241118-WA0029.jpg
Published on

ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸೋಮವಾರ ರಾಮದುರ್ಗ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ತಾಲೂಕಿನ ಪ್ರತಿ ಗ್ರಾಮ ಪಂಚಾಯತ್ ಕುಂದು ಕೊರತೆ ಹಾಗೂ ಸದಸ್ಯರ ಸಮಸ್ಯೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು.

ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರವನ್ನೂ ಒದಗಿಸಿದರು.

ಈ ವೇಳೆ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ, ಆಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net