ಚಿಕ್ಕಹಟ್ಟಿಹೊಳಿ ಗ್ರಾಮದ ಲಕ್ಷ ದೀಪೋತ್ಸವದಲ್ಲಿ ಎಂಎಲ್ ಸಿ ಚನ್ನರಾಜ ಕುಟುಂಬ ಭಾಗಿ

IMG-20241127-WA0010.jpg
Published on

ಖಾನಾಪುರ: ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಆರಾಧ್ಯದೈವ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಂಡಿದ್ದರು.

ಶ್ರೀ ವೀರಭದ್ರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದ ಅವರು, ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿವಿಧ ಮಠಾಧೀಶರ ಆಶೀರ್ವಾದ ಪಡೆದರು.

ಕಾರ್ಯಕ್ರಮದಲ್ಲಿ‌ ಮುರಗೋಡ ದುರದುಂಡೇಶ್ವರ (ಮಹಾಂತ) ಮಠದ ಮ.ನಿ.ಪ್ರ.ಸ್ವ ಶ್ರೀ ನೀಲಕಂಠ ಮಹ್ವಾಸ್ವಾಮಿಗಳು, ಹುಕ್ಕೇರಿ ಹಿರೇಮಠದ ಷ.ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ದೊಡವಾಡದ ಷ‌.ಬ್ರ ಶಿವಾಚಾರ್ಯ ಮಹಾಸ್ವಾಮಿಗಳು, ಮುತ್ನಾಳದ ಷ.ಬ್ರ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳು, ಬೈಲಹೊಂಗಲ ಮೂರು ಸಾವಿರ ಮಠದ ಮ.ನಿ.ಪ್ರ.ಸ್ವ ನೀಲಕಂಠ ಮಹಾಸ್ವಾಮಿಗಳು, ಹಿರೇಮಠ ಸಂಗೊಳ್ಳಿಯ ಷ.ಬ್ರ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ವೇದಮೂರ್ತಿ ಚಂಬಯ್ಯ ಸ್ವಾಮಿಗಳು, ವೇದಮೂರ್ತಿ ದುಂಡಯ್ಯ ಸ್ವಾಮಿಗಳು, ದೇವಸ್ಥಾನ ಕಮೀಟಿಯ ಅಧ್ಯಕ್ಷರು, ಸದಸ್ಯರು, ಭಕ್ತಾಧಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net