ಲಾನ್‌ಟೆನ್ನಿಸ್ ಪಂದ್ಯಾವಳಿಗೆ ನಮೋಶಿ : ಚಾಲನೆ ಪಠ್ಯೇತರ ಚಟುವಟಿಕೆಗೂ ಒತ್ತು ಕೊಡಿ

0611Klb02
Published on

ವಿಜಯವಾಣಿ ಸುದ್ದಿಜಾಲ ಕಲಬುರಗಿ

ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಕೊಳ್ಳಲು ಹೆಚ್ಚು ಒತ್ತು ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಹೇಳಿದರು.

ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ರಾಜ್ಯಮಟ್ಟದ ಲಾನ್ ಟೆನ್ನಿಸ್ ಪಂದ್ಯಾವಳಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು.

ವಿಶೇಷವಾಗಿ ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಲು ಶಿಕ್ಷಕರು ಹೆಚ್ಚಿನ ಮುತವರ್ಜಿ ವಹಿಸಬೇಕು. ಅಗತ್ಯ ಕ್ರೀಡಾಸೌಲಭ ಒದಗಿಸಬೇಕು. ಕ್ರೀಡೆಯ ವಿಶೇಷ ತರಬೇತಿಗೆ ಪ್ರೋತ್ಸಾಹಿಸಬೇಕು. ಕಲ್ಯಾಣ ಕರ್ನಾಟಕ ಪ್ರದೇಶದ ಮುಕ್ಕಳು ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರೂ ಸೂಕ್ತ ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಅವಕಾಶ ಒದಗಿಸಿಕೊಡುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಶಿವಗೊಂಡಪ್ಪ ಕಣ್ಣಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ ಗೋನಾಯಕ್, ಟೆನ್ನಿಸ್ ಆಟಗಾರ ಕೆ.ಹೆಚ್.ಪಾಟೀಲ್, ರಾಜು ದೊಡ್ಮನಿ, ಚನ್ನಬಸಪ್ಪ ಕೊಲ್ಲೂರ್, ಪ್ರಭು ಮಾಚನೂರ, ಬಸವರಾಜ ರಟಕಲ್, ಶಿವಶರಣಪ್ಪ ಎಸ್, ನಾರಾಯಣರಡ್ಡಿ, ಸಂತೋಷ ಕುಲಕರ್ಣಿ, ದಶರಥ, ವಿಶ್ವನಾಥ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ, ತರಬೇತುದಾರರಾದ ಪ್ರವೀಣಕುಮಾರ ಪುಣೆ, ಸಂಜಯ ಬಾಣದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net