ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಎಂಎಲ್‌ಸಿ: ಮಣಿಗೆರೆ ಸಮೀಪ ಅಪಘಾತ ಪ್ರಕರಣ

MLC Madhu Made Gowda visits MIMS Mandya
Published on

ಮಂಡ್ಯ: ಮದ್ದೂರು ತಾಲೂಕು ಮಣಿಗೆರೆ ಗ್ರಾಮದ ಸಮೀಪ ಕಾರು ಮತ್ತು ಗೂಡ್ಸ್ ಟೆಂಪೊ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡು ಮಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಭೇಟಿ ಮಾಡಿ ಅವರ ಯೋಗಕ್ಷೇಮ ವಿಚಾರಿಸಿದರು.

ಭೇಟಿ ನೀಡಿದ ಎಂಎಲ್‌ಸಿ, ಧೈರ್ಯದಿಂದ ಇರುವಂತೆ ಸಂತ್ರಸ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ಆತ್ಮವಿಶ್ವಾಸ ತುಂಬಿದರು. ಅಲ್ಲದೆ, ಗಾಯಾಳುಗಳಿಗೆ ನೀಡುತ್ತಿರುವ ಚಿಕಿತ್ಸೆಯ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿ, ನುರಿತ ವೈದ್ಯರ ಮೇಲ್ವಿಚಾರಣೆಯಲ್ಲಿ ಎಲ್ಲರಿಗೂ ಆಧ್ಯತೆಯ ಮೇರೆಗೆ ಸೂಕ್ತ ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ. ಗಾಯಾಳುಗಳು ಮತ್ತು ಅವರ ಕುಟುಂಬದ ಸದಸ್ಯರು ಧೃತಿಗೆಡಬಾರದು. ಸರ್ಕಾರ ತಮ್ಮೊಂದಿಗೆ ಇರಲಿದೆ ಎಂದು ಹೇಳಿದರು.

ಮದ್ದೂರು ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಭರತೇಶ್, ಬಿ.ಗಿರೀಶ್, ಮುಖಂಡರಾದ ಅಪ್ಪಾಜಿ ಮುಡಿನಹಳ್ಳಿ, ಅಣ್ಣೂರು ಸಿದ್ದಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net